ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಆವರಣದಲ್ಲಿ ಸ್ಥಾಪನೆ ಮಾಡಲಾಗಿರುವ ನಾಡಪ್ರಭು ಕೆಂಪೇಗೌಡ ಅವರ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಅನಾವರಣಗೊಳಿಸಿದರು.
ಪ್ರತಿಮೆಗೆ ‘ಪ್ರಗತಿಯ ಪ್ರತಿಮೆ: ಎಂದು ನಾಮಕರಣ ಮಾಡಲಾಗಿದ್ದು, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಗೆ ಸೂಕ್ತ ಗೌರವ ನೀಡುವ ಉದ್ದೇಶದಿಂದ ಇದನ್ನು ಸ್ಥಾಪನೆ ಮಾಡಲಾಗಿದೆ.
92 ಟನ್ ತೂಕದ ಕಂಚನ್ನು ಪ್ರತಿಮ ನಿರ್ಮಾಣಕ್ಕಾಗಿ ಬಳಸಲಾಗಿದೆ. 120 ಟನ್ ಉಕ್ಕನ್ನು ಪ್ರತಿಮೆಯ ಪೀಠ ಮತ್ತು ಥೀಮ್ ಪಾರ್ಕ್ ಅಭಿವೃದ್ಧಿಗೆ ಬಳಸಲಾಗಿದೆ. ಈ ಪ್ರತಿಮೆಯ ಖಡ್ಗದ ತೂಕ ನಾ 4 ಟನ್. ಪ್ರತಿಮೆಯ ಪೀಠದ ಎತ್ತರ 18 ಅಡಿ ಮತ್ತು ಥೀಮ್ ಪಾರ್ಕಿನ ವಿಸ್ತಾರ 22 ಎಕರೆ. 64 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣವಾಗಿದೆ. ಪ್ರತಿಮೆ ಸ್ಥಳದಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಥೀಮ್ ಪಾರ್ಕ್ ಅಭಿವೃದ್ಧಿಪಡಿಸಲಾಗಿದೆ.
ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ "ಬೆಂಗಳೂರು ನಗರ ನಿರ್ಮಾತೃ ನಾಡ ಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ (ಪ್ರಗತಿಯ ಪ್ರತಿಮೆ) ಲೋಕಾರ್ಪಣೆ.#StatueofProsperity #KarnatakaWelcomesModi #ಪ್ರಗತಿಯಪ್ರತಿಮೆ
https://t.co/tVKh7ltBAA— CM of Karnataka (@CMofKarnataka) November 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.