ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕದ ಸಮಸ್ತ ಜನರಿಗೆ ನನ್ನ ಕೋಟಿಕೋಟಿ ಪ್ರಣಾಮಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ, “ಬೆಂಗಳೂರು ನಗರವನ್ನು ನಾಡಪ್ರಭು ಕೆಂಪೇಗೌಡರ ಪರಿಕಲ್ಪನೆಯಂತೆಯೇ ಅಭಿವೃದ್ಧಿಪಡಿಸುತ್ತೇವೆ. ಕೆಂಪೇಗೌಡರು ಬೆಂಗಳೂರನ್ನು ಆರ್ಥಿಕವಾಗಿ ಮಾತ್ರವಲ್ಲ ಸಾಂಸ್ಕೃತಿವಕಾಗಿಯೂ ಸದೃಢಗೊಳಿಸಸುವ ಬಗ್ಗೆ ಚಿಂತಿಸಿದ್ದರು. ಬೆಂಗಳೂರು ಇಂದು ಜಾಗತಿಕ ನಗರವಾಗಿ ಬೆಳೆದಿದೆ” ಎಂದಿದ್ದಾರೆ
ಬೆಂಗಳೂರಿನ ಪರಂಪರೆ ಸಂರಕ್ಷಿಸುವ ಜೊತೆಗೆ ಆಧುನಿಕ ಸೌಲಭ್ಯಗಳನ್ನೂ ಒದಗಿಸಬೇಕು. ಈ ಕಾರ್ಯಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ನಾವು ವೇಗವನ್ನು ಭಾರತದ ಮಹತ್ವಾಕಾಂಕ್ಷೆ ಮತ್ತು ಮಾಪನವನ್ನು ಭಾರತದ ಶಕ್ತಿ ಎಂದು ನಾವು ಎಂದು ಪರಿಗಣಿಸುತ್ತೇವೆ ಎಂದಿದ್ದಾರೆ.
“10 ವರ್ಷಗಳ ಹಿಂದೆ ಯೋಚಿಸಲು ಆಗದಂಥ ಹಲವು ಬೆಳವಣಿಗೆಗಳು ಈಗ ದೇಶದಲ್ಲಿ ನಡೆದಿವೆ. ಹಿಂದಿನ ಭಾರತದಲ್ಲಿ ಕಲ್ಪಿಸುವುದೂ ಕಷ್ಟ ಎನ್ನುವಂಥ ಸಂಗತಿಗಳು ಈಗ ಕಾರ್ಯಸಾಧುವಾಗಿದೆ. ಇದಕ್ಕೆ ಸರ್ಕಾರಗಳ ಆಲೋಚನೆಗಳೂ ಮುಖ್ಯವಾಗುತ್ತವೆ. ಹಿಂದೆ ಸ್ಪೀಡ್ ಎನ್ನುವುದು ಐಷಾರಾಮಿ ಎನಿಸಿತ್ತು. ಧಾರಣ ಸಾಮರ್ಥ್ಯವು ದುಬಾರಿಯಾಗಿತ್ತು. ನಾವು ಈ ಯೋಚನೆ ಬದಲಿಸಿದೆವು. ವೇಗ ಮತ್ತು ಧಾರಣ ಸಾಮರ್ಥ್ಯವನ್ನು ದೇಶದ ಪ್ರಗತಿಗೆ ಅತ್ಯಗತ್ಯ ಅಂಶಗಳನ್ನಾಗಿ ಮಾಡಿದೆವು. ದೇಶದ ಮೂಲ ಸೌಕರ್ಯ ವ್ಯವಸ್ಥೆ ಸುಧಾರಿಸಲು ಅಗತ್ಯ ಕ್ರಮ ತೆಗೆದುಕೊಂಡೆವು” ಎಂದಿದ್ದಾರೆ.
ಬೆಂಗಳೂರು ಭಾರತದ ಭವಿಷ್ಯಕ್ಕೆ ಅತ್ಯಂತ ಮುಖ್ಯ ನಗರ. ಬೆಂಗಳೂರು ಭಾರತದ ಯುವಶಕ್ತಿಯ ಪ್ರತೀಕವಾಗಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ಕೇವಲ ಒಂದು ರೈಲು ಮಾತ್ರವೇ ಅಲ್ಲ. ಅದು ಹೊಸ ಭಾರತದ ಹೊಸ ಮೈಲಿಗಲ್ಲು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.