ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆಗೆ ಇಪ್ಪತೈದು ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಜನಾರ್ಧನ ಸ್ವಾಮಿ ದೇವಾಲಯದಿಂದ ಆರಂಭಗೊಂಡ ಪಾದಯಾತ್ರೆಗೆ ದೀಪ ಬೆಳಗಿಸುವುದರ ಮೂಲಕ ದೇವಾಲಯದ ಮುಖ್ಯಸ್ಥ ಶರತ್ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು.
ಕಳೆದೆರಡು ವರ್ಷ ಕೊರೋನಾ ಕಾರಣದಿಂದ ಸರಳವಾಗಿ ನಡೆದಿದ್ದ ಪಾದಯಾತ್ರೆ ಈ ಬಾರಿ ವಿಜೃಂಭಣೆಯಿಂದ ನಡೆದಿದ್ದು ಸಾಗರೋಪಾದಿಯಲ್ಲಿಜನರು ಮಂಜುನಾಥ ಸ್ವಾಮಿಯ ಸನ್ನಿಧಿಗೆ ಭಕ್ತಿ ಭಾವದೊಂದಿಗೆ ತೆರಳಿದರು .50 ಯಕ್ಷಗಾನ ವೇಷಧಾರಿಗಳು, ವಿವಿಧ ಭಜನಾ ಮಂಡಳಿಗಳು ಪಾದಯಾತ್ರೆಯ ವಿಷೇಶ ಆಕರ್ಷಣೆಯಾಗಿತ್ತು. ಮಕ್ಕಳು, ವೃದ್ಧರು, ಗಣ್ಯವ್ಯಕ್ತಿಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ವಿದ್ಯಾರ್ಥಿಗಳು, ಅಧ್ಯಾಪಕರು ಸೇರಿದಂತೆ ಕ್ಷೇತ್ರದ ಹಲವಾರು ಭಕ್ತಾಧಿಗಳು ಕಾಲ್ನಡಿಗೆಯಲ್ಲಿ ಪಾಲ್ಗೊಂಡಿದ್ದರು.
ಪಾದಯಾತ್ರೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ್ ಪರಿಷತ್ ಶಾಸಕರುಗಳಾದ ಕೆ. ಪ್ರತಾಪ್ ಸಿಂಹ ನಾಯಕ್, ಕೆ. ಹರೀಶ್ಕುಮಾರ್, ಪಾದಯಾತ್ರೆ ಸಮಿತಿಯ ಸಂಚಾಲಕರಾದ ಪೂರನ್ ವರ್ಮ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಹೆಚ್. ಮಂಜುನಾಥ್, ಅಖಿಲ ಕರ್ನಾಟಕ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಮಸ್ವಾಮಿ ಹಾಗೂ ಮತ್ತಿತರಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.
ಯಾತ್ರೆಗೆ ಅನೇಕ ಮುಂಜಾಗೃತಾ ಕ್ರಮವನ್ನು ವಹಿಸಿದ್ದು, ರಕ್ಷಣಾ ದೃಷ್ಟಿಯಿಂದ ಆರಕ್ಷಕ ಪಡೆ, ಆ್ಯಂಬುಲೆನ್ಸ್ ವ್ಯವಸ್ಥೆ ಹಾಗೂ ಅಲ್ಲಲ್ಲಿ ಬಾಯಾರಿಕೆಗೆ ತಂಪು ಪಾನೀಯ ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ವ್ಯವಸ್ಥೆಗಳನ್ನು ಸ್ವಯಂ ಸೇವಕರ ತಂಡ ನಿಭಾಯಿಸಿತು. ಉಜಿರೆಯಿಂದ ಆರಂಭವಾದ ಪಾದಯಾತ್ರೆ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಸಂಪೂರ್ಣಗೊಂಡಿತು.
ವರದಿ: ಸುಚೇತಾ ಹೆಗ್ಡೆ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ, ಎಸ್.ಡಿ.ಎಂ ಕಾಲೇಜು, ಉಜಿರೆ
ಚಿತ್ರಗಳು: ಅರ್ಪಿತ್ ಇಚ್ಛೆ, ಶಶಿಧರ್ ಮತ್ತು ಗ್ಲೆನ್ ಮೋನಿಸ್, ಎಸ್.ಡಿ.ಎಂ ಕಾಲೇಜು, ಉಜಿರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.