ನವದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ನಿನ್ನೆ ನ್ಯಾಷನಲ್ ಪ್ಯಾಲೇಸ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು ಪ್ರಮಾಣ ವಚನ ಸ್ವೀಕರಿಸಿದರು. ಅವರು 1990 ರ ದಶಕದಲ್ಲಿ ಅವರು ಆ ದೇಶದ ಉಪಪ್ರಧಾನಿಯಾಗಿದ್ದರು.
1998 ರಲ್ಲಿ ಅಧಿಕಾರ ದುರುಪಯೋಗದ ಆರೋಪಗಳ ನಡುವೆ ಉಪ ಪ್ರಧಾನ ಮಂತ್ರಿಯಾಗಿ ವಜಾಗೊಂಡಿದ್ದರು. ಇದೀಗ ಇಬ್ರಾಹಿಂ ಮಲೇಷ್ಯಾದ ಪ್ರಧಾನ ಮಂತ್ರಿ ಹುದ್ದೆಗೆ ಏರಿದ್ದಾರೆ. ಸಾರ್ವತ್ರಿಕ ಚುನಾವಣೆಯ ಐದು ದಿನಗಳ ನಂತರ ಮಲೇಷ್ಯಾದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ.
Congratulations Dato' Seri @anwaribrahim on your election as the Prime Minister of Malaysia. I look forward to working closely together to further strengthen India-Malaysia Enhanced Strategic Partnership.
— Narendra Modi (@narendramodi) November 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.