ನವದೆಹಲಿ: ಕಳೆದ ಎಂಟು ವರ್ಷಗಳಲ್ಲಿ ಭಾರತದ ಹಾಲಿನ ಉತ್ಪಾದನೆಯು 83 ಮಿಲಿಯನ್ ಟನ್ಗಳಷ್ಟು ಹೆಚ್ಚಳವಾಗಿ ಗಮನಾರ್ಹ ಬೆಳವಣಿಗೆಯನ್ನು ದಾಖಲಿಸಿದೆ. 2013-14ರಲ್ಲಿ 138 ದಶಲಕ್ಷ ಟನ್ಗಳಷ್ಟಿದ್ದ ಉತ್ಪಾದನೆಯು 2021-22ರಲ್ಲಿ 221 ದಶಲಕ್ಷ ಟನ್ಗಳಿಗೆ ಏರಿಕೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಾರಿ ಶಕ್ತಿಯನ್ನು ಮತ್ತಷ್ಟು ಬಲಪಡಿಸಲು ಡೈರಿ ಕ್ಷೇತ್ರವೂ ಉತ್ತಮ ಮಾರ್ಗವಾಗಿದೆ ಎಂದಿದ್ದಾರೆ.
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಶೋತ್ತಮ್ ರೂಪಾಲಾ ಅವರು ಕಳೆದ ಎಂಟು ವರ್ಷಗಳಲ್ಲಿ ಹೈನುಗಾರಿಕೆ ಮತ್ತು ಪಶುಸಂಗೋಪನೆ ಕ್ಷೇತ್ರದ ನೀತಿ ದೃಷ್ಟಿಕೋನದಲ್ಲಿ ಮಾದರಿ ಬದಲಾವಣೆಗೆ ಸರ್ಕಾರದ ಉಪಕ್ರಮಗಳು ಕಾರಣವಾಗಿವೆ ಎಂದಿದ್ದಾರೆ.
ಈ ಕ್ಷೇತ್ರಕ್ಕೆ ಹೆಚ್ಚಿನ ಬಜೆಟ್ ಹಂಚಿಕೆಯನ್ನು ಮಾಡಲಾಗಿದೆ ಎಂದು ಅವರು, ಭಾರತವನ್ನು ವ್ಯಾಪಿಸುವಂತೆ ಕಾಲು-ಬಾಯಿ ರೋಗಗಳಿಗೆ ಲಸಿಕೆ ಕಾರ್ಯಕ್ರಮವನ್ನು ಕೇಂದ್ರವು ವಿಸ್ತರಿಸಿದೆ. ಇದನ್ನು ರೋಗ ನಿರ್ಮೂಲನಾ ಕಾರ್ಯಕ್ರಮವಾಗಿ ಪ್ರಾರಂಭಿಸಲಾಗಿದೆ, ಮೊದಲು ಆಯ್ದ ರಾಜ್ಯಗಳು ಮತ್ತು ಜಿಲ್ಲೆಗಳಿಗೆ ಸೀಮಿತವಾದ ರೋಗ ನಿಯಂತ್ರಣ ಕಾರ್ಯಕ್ರಮವಾಗಿತ್ತು, ಈ ದೇಶವ್ಯಾಪಿಯಾಗಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.