ಬೆಂಗಳೂರು: 2023ರ ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಹೊಸದಾಗಿ 5 ಲಕ್ಷ ಮನೆಗಳನ್ನು ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ವಸತಿ ಸಚಿವ ವಿ ಸೋಮಣ್ಣ ಅವರು ಹೇಳಿದ್ದಾರೆ.
2019 ರಿಂದ ಇದುವರೆಗೆ ರಾಜ್ಯದಲ್ಲಿ 5 ಲಕ್ಷ ಮನೆಗಳ ನಿರ್ಮಾಣವನ್ನು ಪೂರ್ಣ ಮಾಡಲಾಗಿದೆ. ಮುಂದಿನ ಮಾರ್ಚ್ ಅಂತ್ಯದೊಳಗೆ ಇನ್ನೂ ಐದು ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಇದಕ್ಕೆ 5,000 ಕೋಟಿ ರೂಪಾಯಿಗಳ ಅಗತ್ಯವಿದೆ. ಪ್ರಸ್ತುತ ವಸತಿ ಇಲಾಖೆಯಲ್ಲಿ 1500 ರಿಂದ 2,000 ಕೋಟಿ ರೂಪಾಯಿಗಳ ಹಣ ಲಭ್ಯವಿದೆ. ಉಳಿದ ಹಣವನ್ನು ಅನುದಾನದ ರೂಪದಲ್ಲಿ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
5 ಲಕ್ಷ ಮನೆಗಳ ಪೈಕಿ ಆಶ್ರಯ ಯೋಜನೆಯಲ್ಲಿ ಮೂರು ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕೊಳಚೆ ನಿರ್ಮೂಲನ ಮಂಡಳಿ ಮೂಲಕ 1.80 ಲಕ್ಷ ಮನೆಗಳ ನಿರ್ಮಾಣವಾಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.