ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವರ್ಷದಲ್ಲಿ ಐದು ಮೆಗಾ ಹಾಸ್ಟೆಲ್ಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿನ ಹಾಸ್ಟೆಲ್ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಅಂಬೇಡ್ಕರ್ ಅವರ ಆಶಯದಂತೆ ಮುಂದಿನ ಒಂದು ವರ್ಷದಲ್ಲಿ ಎಸ್ಟಿ, ಎಸ್ಸಿ, ಒಬಿಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಂದು ಸಾವಿರ ಮಕ್ಕಳಿಗೆ ಆಶ್ರಯ ಕಲ್ಪಿಸುವ ಐದು ಮೆಗಾ ಹಾಸ್ಟೆಲ್ಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರು, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರುಗಳಲ್ಲಿ ಈ ಹಾಸ್ಟೆಲ್ಗಳು ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಶಿಕ್ಷಣದ ಜೊತೆಗೆ ಉದ್ಯೋಗ ಸೃಷ್ಟಿಸುವುದು ಕೂಡ ನಮ್ಮ ಸರಕಾರದ ಆದ್ಯತೆಯಾಗಿದೆ ಎಂದ ಅವರು, 5,00,000 ಮಹಿಳೆಯರಿಗೆ ಉದ್ಯೋಗ ಸೃಷ್ಟಿಸಲು ಗಮನಹರಿಸಲಾಗುತ್ತಿದೆ. ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎಸ್ಟಿ, ಎಸ್ಸಿ ಜನಾಂಗಗಳನ್ನು ಒಳಗೊಂಡಂತೆ ಎರಡು ಶ್ರೀ ಶಕ್ತಿ ಸಂಘಗಳನ್ನು ತೆರೆದು 5 ಲಕ್ಷ ಸಾಲ ನೀಡಿ ಅವರು ಉತ್ಪಾದಿಸುವ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಜೋಡಣೆ ಮಾಡಿ ಆದಾಯ ಬರುವಂತೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.