News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ಬಗ್ಗೆ ಹೇಳಿಕೆ: ಕಾಂಗ್ರೆಸ್ಸನ್ನು ಜನರು ಕ್ಷಮಿಸಲ್ಲ ಎಂದ ಬಿಜೆಪಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರ ಹೇಳಿಕೆಯನ್ನು ಬಿಜೆಪಿ ನಾಯಕ ಶಹನವಾಜ್ ಹುಸೇನ್ ಅವರು ಖಂಡಿಸಿದ್ದಾರೆ.

“ರಾಜಾ ಪಟೇರಿಯಾ ಅವರ ಹೇಳಿಕೆ ಶೋಚನೀಯ. ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡುತ್ತಿರುವ ರೀತಿ ಸ್ವೀಕಾರಾರ್ಹವಲ್ಲ. ಈ ಹಿಂದೆ ಅವರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿಯನ್ನು ರಾವಣನಿಗೆ ಹೋಲಿಸಿದ್ದರು. ಈಗ ಅವರು ಮೋದಿಯ ಹತ್ಯೆ ಬಗ್ಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.

ಪ್ರಧಾನಿ ಮೋದಿಯ ಹೆಚ್ಚುತ್ತಿರುವ ಜನಪ್ರಿಯತೆಯ ಬಗ್ಗೆ ಕಾಂಗ್ರೆಸ್ ಭಯಭೀತಗೊಂಡಿದೆ. ಮೋದಿ 130 ಕೋಟಿ ಭಾರತೀಯರ ಹೃದಯದಲ್ಲಿ ನೆಲೆಸಿದ್ದಾರೆ. ಕಾಂಗ್ರೆಸ್ ನಾಯಕರು ಮಾತನಾಡುತ್ತಿರುವ ರೀತಿಯನ್ನು ಈ ದೇಶದ ಜನರು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

“ಪ್ರಧಾನಿ ಮೋದಿ ಅವರು ಹಿಂದುಳಿದ ವರ್ಗದಿಂದ ಬಂದಿದ್ದಾರೆ. ಅವರ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿರುವ ರೀತಿ ಜನರನ್ನು ಆಕ್ರೋಶಕ್ಕೀಡು ಮಾಡಿದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top