News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದ 114 ನಮ್ಮ ಕ್ಲಿನಿಕ್‌ಗಳಿಗೆ ವರ್ಚುವಲ್‌ ಆಗಿ ಚಾಲನೆ ನೀಡಿದ ಸಿಎಂ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ಇಂದು ರಾಜ್ಯದಾದ್ಯಂತ ಏಕಕಾಲಕ್ಕೆ 114 ನಮ್ಮ ಕ್ಲಿನಿಕ್‌ಗಳಿಗೆ ವರ್ಚುವಲ್‌ ಆಗಿ ಚಾಲನೆ ನೀಡಿದರು

ನಗರ ಪ್ರದೇಶದ ಬಡ ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ನಗರ ಪ್ರದೇಶಗಳಲ್ಲಿ ಈ 438 ನಮ್ಮ ಕ್ಲಿನಿಕ್‍ಗಳನ್ನು ಸ್ಥಾಪಿಸಲಾಗಿದೆ. ಹುಬ್ಬಳ್ಳಿಯ ಭೈರಿದೇವರಕೊಪ್ಪದಿಂದ ಏಕ ಕಾಲಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದಕ್ಕೆ ಚಾಲನೆ ನೀಡಿದ್ದಾರೆ.

ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಎಲ್ಲ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ನಮ್ಮ ಕ್ಲಿನಿಕ್ 1000 ಚದರ ಅಡಿ ವಿಸ್ತೀರ್ಣ ಹೊಂದಿದ್ದು ಇಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ ಕೂಠಡಿ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಆಡಳಿತ ಕಛೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿದ್ದು ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

ನಮ್ಮ ಕ್ಲಿನಿಕ್‍ಗಳಲ್ಲಿ ಒಬ್ಬರು ವೈದ್ಯಾಧಿಕಾರಿ, ಒಬ್ಬರು ಶುಶ್ರೂಷಕರು, ತಲಾ ಒಬ್ಬೊಬ್ಬ ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಕಿರಿಯ ದರ್ಜೆ ಸಹಾಯಕರು, ಒಬ್ಬರು ಡಿ ದರ್ಜೇ ನೌಕರರು ಕಾರ್ಯನಿರ್ವಹಿಸಲಿದ್ದಾರೆ.

ನಮ್ಮ ಕ್ಲಿನಿಕ್‍ಗಳು ಬೆಳಗ್ಗೆ 9 ರಿಂದ ಸಂಜೆ 4-30 ರವರೆಗೆ ಸೋಮವಾರದಿಂದ ಶನಿವಾರದವರೆಗೆ ಕಾರ್ಯನಿರ್ವಹಿಸುತ್ತವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top