ಬೆಂಗಳೂರು: ಇವತ್ತು ಬಿಜೆಪಿಯ “ಬೂತ್ ವಿಜಯ ಸಂಕಲ್ಪ ಅಭಿಯಾನ” ಆರಂಭವಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇವತ್ತು ವಿಜಯಪುರದಲ್ಲಿ ಕರ್ನಾಟಕದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಕೊಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
ಬಿಟಿಎಂ ಲೇ ಔಟ್ ಮತ್ತು ಜಯನಗರದಲ್ಲಿ ಇಂದು “ಬೂತ್ ವಿಜಯ ಸಂಕಲ್ಪ ಅಭಿಯಾನ”ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತುಮಕೂರಿನಲ್ಲಿ ಉದ್ಘಾಟನೆ ನೆರವೇರಿಸಲಿದ್ದಾರೆ. ನಮ್ಮೆಲ್ಲರ ಸರ್ವೋಚ್ಚ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ವಿಜಯಪುರದಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜೊತೆಗೂಡಿ ಈ ಕಾರ್ಯವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಅಪ್ಪ- ಮಗಳ ರಾಜಕಾರಣ ನಿಲ್ಲಿಸಿ ಇಲ್ಲಿಂದ ಕಮಲ ಅರಳುವಂತೆ ಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದು ಮನವಿ ಮಾಡಿದರು.
ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಹ್ಮಣ್ಯ, ಜಿಲ್ಲಾ ಅಧ್ಯಕ್ಷ ಎನ್.ಆರ್.ರಮೇಶ್, ಮಾಜಿ ಮಹಾಪೌರ ಎಸ್.ಕೆ.ನಟರಾಜ್, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.