News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಂಡಮಾನ್‌ನ 21 ದ್ವೀಪಗಳಿಗೆ ಪರಮ ವೀರ ಚಕ್ರ ಪುರಸ್ಕೃತ ಹೆಸರು

ನವದೆಹಲಿ: ಪರಾಕ್ರಮ್ ದಿವಸ್ ಹಿನ್ನೆಲೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ದೊಡ್ಡ  ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಹೆಸರಿಸಿದ್ದಾರೆ.

ಅಲ್ಲದೇ ಈ ಹಿಂದೆ ರಾಸ್ ಐಲ್ಯಾಂಡ್ಸ್ ಎಂದು ಕರೆಯಲಾಗುತ್ತಿದ್ದ ಈಗಿನ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಾದ ನೇತಾಜಿಗೆ ಮೀಸಲಾಗಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು.

ಶ್ರೀನಗರ ವಿಮಾನ ನಿಲ್ದಾಣದ ಬಳಿ ಪಾಕಿಸ್ತಾನಿ ನುಸುಳುಕೋರರ ವಿರುದ್ಧ ಹೋರಾಡುವಾಗ ನವೆಂಬರ್ 3, 1947 ರಂದು ಕಾರ್ಯಾಚರಣೆಯಲ್ಲಿ ಪ್ರಾಣ ಕಳೆದುಕೊಂಡ ಮೊದಲ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಸೋಮನಾಥ್ ಶರ್ಮಾ ಅವರ ಹೆಸರನ್ನು ಅತಿದೊಡ್ಡ ದ್ವೀಪಕ್ಕೆ ಹೆಸರಿಸಲಾಗಿದೆ.

21 ದ್ವೀಪಗಳಿಗೆ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರಾದ ಮೇಜರ್ ಸೋಮನಾಥ ಶರ್ಮಾ,  ಲ್ಯಾನ್ಸ್ ನಾಯಕ್ ಕರಮ್ ಸಿಂಗ್, ಮೇಜರ್ ರಾಮ ರಘೋಬಾ ರಾಣೆ, ನಾಯಕ್ ಜಾದುನಾಥ್ ಸಿಂಗ್, ಕಂಪನಿ ಮೇಜರ್ ಪೀರು ಸಿಂಗ್,‌ ಮೇಜರ್ ನಿರ್ಮಲಜಿತ್ ಸಿಂಗ್ ಸೆಖೋನ್, ಮೇಜರ್ ರಾಮಸ್ವಾಮಿ ಪರಮೇಶ್ವರನ್, ನೈಬ್ ಸುಬೇದಾರ್ ಬನಾ ಸಿಂಗ್, ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಸುಬೇದಾರ್ ಮೇಜರ್  ಸಂಜಯ್ ಕುಮಾರ್ ಮತ್ತು ಸುಬೇದಾರ್ ಮೇಜರ್ ನಿವೃತ್ತ (ಗೌರವ ಕ್ಯಾಪ್ಟನ್) ಗ್ರೆನೇಡಿಯರ್ ಯೋಗೇಂದ್ರ ಸಿಂಗ್ ಯಾದವ್ ಹೆಸರನ್ನು ಇಡಲಾಗಿದೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಸರ್ಕಾರವು 2021 ರಲ್ಲಿ ಜನವರಿ 23 ಅನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿತ್ತು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಐತಿಹಾಸಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ನೇತಾಜಿ ಅವರ ಸ್ಮರಣೆಯನ್ನು ಗೌರವಿಸಲು ರಾಸ್ ದ್ವೀಪಗಳನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ ಎಂದು ಮರುನಾಮಕರಣ ಮಾಡಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top