News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಲ ಜೀವನ್ ಮಿಷನ್ ಅಡಿ 11 ಕೋಟಿ ನಲ್ಲಿ ನೀರಿನ ಸಂಪರ್ಕ: ಮೋದಿ ಶ್ಲಾಘನೆ

ನವದೆಹಲಿ: ಜಲ ಜೀವನ್ ಮಿಷನ್ ಅಡಿಯಲ್ಲಿ 11 ಕೋಟಿ ನಲ್ಲಿ ನೀರಿನ ಸಂಪರ್ಕಗಳ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಈ ಉಪಕ್ರಮದಿಂದ ಪ್ರಯೋಜನ ಪಡೆದ ಎಲ್ಲರಿಗೂ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ ಮತ್ತು ಈ ಮಿಷನ್ ಯಶಸ್ವಿಯಾಗಲು ತಳಮಟ್ಟದಿಂದ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಬುಧವಾರ ಜಲ ಜೀವನ್‌ ಮಿಷನ್‌  ಅಡಿಯಲ್ಲಿ 11 ಕೋಟಿ ಟ್ಯಾಪ್ ವಾಟರ್ ಸಂಪರ್ಕಗಳ ಮೈಲಿಗಲ್ಲನ್ನು ಸಾಧಿಸಿದ ಬಗ್ಗೆ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಜಲ ಶಕ್ತಿ ಸಚಿವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಪ್ರಧಾನ ಮಂತ್ರಿ ಟ್ವೀಟ್ ಮಾಡಿದ್ದು,“ಭಾರತದ ಜನರಿಗೆ ‘ಹರ್ ಘರ್ ಜಲ್’ ಖಚಿತಪಡಿಸುವಲ್ಲಿ ಮಹತ್ತರವಾದ ಸಾಧನೆಯನ್ನು ಈ ಮೈಲಿಗಲ್ಲು ಸೂಚಿಸುತ್ತದೆ. ಈ ಉಪಕ್ರಮದಿಂದ ಪ್ರಯೋಜನ ಪಡೆದ ಎಲ್ಲರಿಗೂ ಅಭಿನಂದನೆಗಳು ಮತ್ತು ಈ ಮಿಷನ್ ಯಶಸ್ವಿಯಾಗಲು ತಳಮಟ್ಟದಲ್ಲಿ ಕೆಲಸ ಮಾಡುವವರಿಗೆ ಅಭಿನಂದನೆಗಳು” ಎಂದಿದ್ದಾರೆ.

2024 ರ ವೇಳೆಗೆ ದೇಶದಾದ್ಯಂತ ಪ್ರತಿ ಗ್ರಾಮೀಣ ಮನೆಗಳಿಗೆ ಕುಡಿಯುವ ನೀರಿನ ಟ್ಯಾಪ್ ನೀರನ್ನು ಒದಗಿಸಲು 2019 ರಲ್ಲಿ ಕೇಂದ್ರವು ಜಲ ಜೀವನ್ ಮಿಷನ್ ಅನ್ನು ಪ್ರಾರಂಭಿಸಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top