News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಸಿದ್ಧ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ

ಬೆಂಗಳೂರು: ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 8.20ಕ್ಕೆ ಹೆಬ್ಬಾಳ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ವರ್ಮಾ ಅವರು ರಚಿಸಿದ  ಭುವನೇಶ್ವರಿ ತಾಯಿ,  ಡಾ.ರಾಜ್ ಕುಮಾರ್ ಸೇರಿದಂತೆ ಹಲವು ಚಿತ್ರಗಳು ಭಾರೀ ಜನಪ್ರಿಯತೆಯನ್ನು ಪಡೆದುಕೊಂಡಿವೆ. ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆಯೂ ಚಿತ್ರ ಬರೆದು ಎಲ್ಲರ ಗಮನಸೆಳೆದಿದ್ದರು. ಮಾತ್ರವಲ್ಲದೆ ಅಪಾರ ಶಿಷ್ಯ ವರ್ಗಕ್ಕೆ ಅವರು ಚಿತ್ರಕಲೆ ಕಲಿಸಿಕೊಟ್ಟಿದ್ದಾರೆ.

ಅವರ ಸಾಧನೆಗೆ ಲಲಿತಾ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜೀವ್ ಗಾಂಧಿ ಪ್ರಶಸ್ತಿ ಲಭಿಸಿವೆ. ಬೆಂಗಳೂರು ವಿವಿ ಅವರಿಗೆ 2011ರಲ್ಲಿ ಗೌರವ ಡಾಕ್ಟರೇಟ್ ಪ್ರದಾನಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top