ನವದೆಹಲಿ: ಲೋಕಸಭೆಗೆ ಹಾಜರಾದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಧರಿಸಿದ್ದ ಆಕಾಶ ನೀಲಿ ಬಣ್ಣದ ಜಾಕೆಟ್ ಎಲ್ಲರ ಗಮನ ಸೆಳೆದಿದೆ. ಮರುಬಳಕೆಯ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ವಿಶೇಷ ಜಾಕೆಟ್ ಇದಾಗಿದೆ.
ಬೆಂಗಳೂರಿನಲ್ಲಿ ನಡೆದ ಇಂಡಿಯಾ ಎನರ್ಜಿ ವೀಕ್ನಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಈ ಜಾಕೆಟ್ ಅನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಿತ್ತು.
ಇಂಡಿಯನ್ ಆಯಿಲ್ ಉದ್ಯೋಗಿಗಳು ಮತ್ತು ಸಶಸ್ತ್ರ ಪಡೆಗಳಿಗೆ ಪರಿಸರ ಸ್ನೇಹಿ ಉಡುಪುಗಳನ್ನು ತಯಾರಿಸಲು ಹತ್ತು ಕೋಟಿಗೂ ಹೆಚ್ಚು ಪ್ಲಾಸ್ಟಿಕ್ ಬಾಟಲಿಗಳನ್ನು ಮರುಬಳಕೆ ಮಾಡುವ ಗುರಿಯನ್ನು ಇಂಡಿಯನ್ ಆಯಿಲ್ ಹೊಂದಿದೆ.
ಮೋದಿ ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರತಿಕ್ರಿಯೆ ನೀಡಲಿದ್ದಾರೆ.
🚨 PM Modi in Karnataka!
Indian oil corp presents 'Modi Jacket' to PM Modi made out of recycled PET Bottles.
More than 10 crore PET Bottles will be recycled to make sustainable garments to India Oil employees and Armed Forces!#IndiaEnergyWeek2023 pic.twitter.com/kSQVI7REk4
— Karthik Reddy 🇮🇳 (@bykarthikreddy) February 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.