ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 5.9 ಮಿಲಿಯನ್ ಟನ್ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಲಿಥಿಯಂ ಒಂದು ನಾನ್-ಫೆರಸ್ ಲೋಹವಾಗಿದ್ದು, EV ಬ್ಯಾಟರಿಗಳಲ್ಲಿನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.
“ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನಾ ಪ್ರದೇಶದಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆಯು ಮೊದಲ ಬಾರಿಗೆ 5.9 ಮಿಲಿಯನ್ ಟನ್ಗಳ ಲಿಥಿಯಂ ಸಂಪನ್ಮೂಲಗಳನ್ನು (G3) ಪತ್ತೆ ಮಾಡಿದೆ” ಎಂದು ಗಣಿ ಸಚಿವಾಲಯ ತಿಳಿಸಿದೆ.
ಅಲ್ಲದೇ ಲಿಥಿಯಂ ಮತ್ತು ಚಿನ್ನ ಸೇರಿದಂತೆ ದೇಶದಲ್ಲಿ ಪತ್ತೆಯಾದ 51 ಖನಿಜ ಬ್ಲಾಕ್ಗಳನ್ನು ಆಯಾ ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದೆ.
“ಈ 51 ಖನಿಜ ಬ್ಲಾಕ್ಗಳಲ್ಲಿ, 5 ಬ್ಲಾಕ್ಗಳು ಚಿನ್ನ ಮತ್ತು ಇತರ ಬ್ಲಾಕ್ಗಳು ಪೊಟ್ಯಾಶ್, ಮಾಲಿಬ್ಡಿನಮ್, ಮೂಲ ಲೋಹಗಳು ಮುಂತಾದ ಸರಕುಗಳಿಗೆ ಸಂಬಂಧಿಸಿದೆ. ಜಮ್ಮು ಮತ್ತು ಕಾಶ್ಮೀರ, ಆಂಧ್ರಪ್ರದೇಶ, ಛತ್ತೀಸ್ಗಢ, ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣ ಸೇರಿದಂತೆ11 ರಾಜ್ಯಗಳಲ್ಲಿ ಹರಡಿವೆ”ಎಂದು ಸಚಿವಾಲಯ ತಿಳಿಸಿದೆ.
ಇವುಗಳಲ್ಲದೆ, ಒಟ್ಟು 7897 ಮಿಲಿಯನ್ ಟನ್ಗಳ ಸಂಪನ್ಮೂಲ ಹೊಂದಿರುವ ಕಲ್ಲಿದ್ದಲು ಮತ್ತು ಲಿಗ್ನೈಟ್ನ 17 ವರದಿಗಳನ್ನು ಸಹ ಕಲ್ಲಿದ್ದಲು ಸಚಿವಾಲಯಕ್ಕೆ ಹಸ್ತಾಂತರಿಸಲಾಗಿದೆ.
Geological Survey of India has for the first time established 5.9 million tonnes inferred resources (G3) of lithium in Salal-Haimana area of Reasi District of Jammu & Kashmir (UT).@GeologyIndia
1/2 pic.twitter.com/tH5uv2BL9m
— Ministry of Mines (@MinesMinIndia) February 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.