ಮುಂಬಯಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ನಿನ್ನೆ ನಡೆದ ಶಿವಸೇನೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಮುಖ್ಯಸ್ಥರನ್ನಾಗಿ ಹೆಸರಿಸಲಾಗಿದೆ.
ಏಕನಾಥ್ ಶಿಂಧೆ ಅವರು ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಪಡೆದ ನಂತರ ಶಿವಸೇನೆಯ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಾಗಿದೆ. ಸಭೆಯ ನಂತರ ಮಾತನಾಡಿದ ಮಹಾರಾಷ್ಟ್ರ ಸಚಿವ ಮತ್ತು ಶಿವಸೇನೆ ನಾಯಕ ಉದಯ್ ಸಾಮಂತ್, ಈ ಕಾರ್ಯಕಾರಿ ಸಭೆಯಲ್ಲಿ ಸಿಎಂ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಪ್ರಸ್ತಾವನೆ ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಈ ಸಭೆಯಲ್ಲಿ ಮಂಡಿಸಲಾಯಿತು. ಇದಲ್ಲದೇ ರಾಜ್ಯದ ಎಲ್ಲ ಯೋಜನೆಗಳಲ್ಲಿ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಿ, ಮರಾಠಿ ಭಾಷೆಗೆ ಗಣ್ಯ ಭಾಷೆಯ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆಯನ್ನು ಮಂಡಿಸಲಾಯಿತು ಎಂದು ತಿಳಿಸಿದ್ದಾರೆ.
ಶಿಂಧೆ ಅವರು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದಿಂದ ಬೇರ್ಪಟ್ಟ ನಂತರ ಅವರನ್ನು ಬೆಂಬಲಿಸುತ್ತಿರುವ ಹಲವಾರು ಶಾಸಕರು, ಸಂಸದರು ಮತ್ತು ಇತರ ಶಿವಸೇನೆ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.