ನವದೆಹಲಿ: ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಮಾಸ್ಟರ್ಕಾರ್ಡ್ ಮಾಜಿ ಸಿಇಒ ಅಜಯ್ ಬಂಗಾ ಅವರನ್ನು ವಿಶ್ವಬ್ಯಾಂಕ್ ಅಧ್ಯಕ್ಷರಾಗಲು ನಾಮನಿರ್ದೇಶನ ಮಾಡಿದ್ದಾರೆ.
ಯುಎಸ್ ಪ್ರಜೆಯಾಗಿರುವ 63 ವರ್ಷದ ಬಂಗಾ ಅವರು ಗುರುವಾರ ಬೈಡನ್ ಅವರಿಂದ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಶತಕೋಟಿ ಡಾಲರ್ಗಳ ನಿಧಿಯನ್ನು ನೋಡಿಕೊಳ್ಳುವ ಸ್ಥಾನವನ್ನು ಪಡೆಯುವ ಸನಿಹದಲ್ಲಿದ್ದಾರೆ.
ವಿಶ್ವಬ್ಯಾಂಕ್ ಬೋರ್ಡ್ ಆಫ್ ಡೈರೆಕ್ಟರ್ಗಳು ನಾಮನಿರ್ದೇಶನವನ್ನು ಅಂಗೀಕರಿಸಿದರೆ ಬಂಗಾ ವಿಶ್ವಬ್ಯಾಂಕ್ ಅಧ್ಯಕ್ಷರಾದ ಮೊದಲ ಭಾರತೀಯ-ಅಮೆರಿಕನ್ ಮತ್ತು ಸಿಖ್-ಅಮೆರಿಕನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಬೈಡೆನ್ ಅವರು ಬಂಗಾ ಅವರನ್ನು ನಾಮನಿರ್ದೇಶನಗೊಳಿಸಿರುವುದಕ್ಕೆ ಭಾರತೀಯ ಅಮೆರಿಕನ್ ಸಮುದಾಯ ಅತೀವ ಸಂತಸ ವ್ಯಕ್ತಪಡಿಸಿದ್ದು, ಇದೊಂದು ಸ್ಪೂರ್ತಿದಾಯಕ ಆಯ್ಕೆ ಎಂದಿದ್ದಾರೆ.
ಬ್ಯಾಂಕಿನ ಧ್ಯೇಯೋದ್ದೇಶಗಳು ಮತ್ತು ಉದ್ದೇಶಗಳ ಬಗ್ಗೆ, ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಪರಿಸರ ಸುಸ್ಥಿರತೆಯ ಮೇಲೆ ಬಂಗಾ ತೀಕ್ಷ್ಣವಾದ ಗಮನವನ್ನು ನೀಡುತ್ತಾರೆ ಎಂದು ಸಿಲಿಕಾನ್ ವ್ಯಾಲಿಯ ಸಾಹಸೋದ್ಯಮ ಬಂಡವಾಳಶಾಹಿ ಮತ್ತು ಸಮಾಜ ಸೇವಕ ರಂಗಸ್ವಾಮಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.