ಬೆಂಗಳೂರು: ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಬೆಂಗಳೂರು ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಈ ಹಿಂದೆ ರಾಜ್ಯದ ಕಂದಾಯ ಸಚಿವ ಆರ್.ಅಶೋಕ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದ್ದರು. ಇಂದು ಅವರು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ
ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ ರಾವ್, ಕಳೆದ ವರ್ಷ ಏಪ್ರಿಲ್ನಲ್ಲಿ ಎಎಪಿಗೆ ಸೇರಿದ್ದರು ಮತ್ತು ಇತ್ತೀಚೆಗೆ ಪಕ್ಷದ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡರು ಮತ್ತು ರಾಜ್ಯದಲ್ಲಿ ಪಕ್ಷದ ಪ್ರಮುಖ ಮುಖಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದರು.
ಬಸವನಗುಡಿ ವಿಧಾನಸಭಾ ಕ್ಷೇತ್ರದಿಂದ ಎಎಪಿಯ ಸಂಭಾವ್ಯ ಅಭ್ಯರ್ಥಿ ಎಂದು ಪರಿಗಣಿಸಲಾಗಿದ್ದ ಭಾಸ್ಕರ್ ರಾವ್ ಅವರು ಬಿಜೆಪಿ ಸೇರಿದ್ದು ಅಚ್ಚರಿ ಬೆಳವಣಿಗೆಯಾಗಿದೆ.
ಬೆಂಗಳೂರಿನಲ್ಲಿರುವ ಬಿಜೆಪಿಯ ರಾಜ್ಯ ಕಚೇರಿಯಲ್ಲಿ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಶಂಕರಪ್ಪ ಅವರ ಉಪಸ್ಥಿತಿಯಲ್ಲಿ ಭಾಸ್ಕರ್ ರಾವ್ ಮತ್ತು ಬೆಂಬಲಿಗರು ಬಿಜೆಪಿ ಸೇರಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಇವತ್ತು ದೇಶದಲ್ಲಿ, ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಪರವಾದ ಅಲೆ ಇದೆ. ಚುನಾವಣೆಯ ಬಿಸಿ ವಾತಾವರಣದಲ್ಲಿ ಇಡೀ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂಬ ಅನಿಸಿಕೆ, ಭಾವನೆ ಜನರಲ್ಲಿದೆ. ಹತ್ತಾರು ನಾಯಕರು, ವಿವಿಧ ಪಕ್ಷಗಳ ಮುಖಂಡರು ಈಗ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.