ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ, 2023ರ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ , ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ, ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಇದು ಮಧ್ಯಂತರ ಪರಿಹಾರ ರೂಪದಲ್ಲಿ ಇರಲಿದೆ. ಆಯೋಗದ ವರದಿ ಬಳಿಕ ಶೇಕಡವಾರು ಪ್ರಮಾಣದಲ್ಲಿ ಬದಲಾವಣೆ ಆಗಬಹುದು” ಎಂದಿದ್ದಾರೆ.
ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 1ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.