ಅಹಮದಾಬಾದ್: ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯಕ್ಕೆ ಅಡ್ಡಿಪಡಿಸುವುದಾಗಿ ಬೆದರಿಕೆ ಹಾಕಿದ್ದ ಮಧ್ಯಪ್ರದೇಶದ ಖಲಿಸ್ತಾನ್ ಪರ ಸಂಘಟನೆಯಾದ ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಬೆಂಬಲಿತರೆಂದು ಶಂಕಿಸಲಾದ ಇಬ್ಬರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 9 ರಂದು ಅಹಮದಾಬಾದ್‌ನಲ್ಲಿ ಕ್ರಿಕೆಟ್ ಪಂದ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಗುಜರಾತಿಗೆ ಆಗಮಿಸಿದ್ದರು. ಈ ವೇಳೆ ಸಿಮ್ ಬಾಕ್ಸ್ ತಂತ್ರಜ್ಞಾನವನ್ನು ಬಳಸಿ ಬೆದರಿಕೆ ಹಾಕಲಾಗಿದೆ ಎಂದು ಗುಜರಾತ್ ಪೊಲೀಸ್‌ನ ಕ್ರೈಂ ಬ್ರಾಂಚ್‌ನ ಸೈಬರ್ ಸೆಲ್ ಘಟಕದ ಅಧಿಕಾರಿಗಳು ಹೇಳಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ನೇ ಟೆಸ್ಟ್ ಪಂದ್ಯಕ್ಕೆ ಅಡ್ಡಿಪಡಿಸುವುದಾಗಿ ಬೆದರಿಕೆ ಹಾಕಿರುವ ಮಧ್ಯಪ್ರದೇಶದ ರೇವಾ ಮತ್ತು ಸತ್ನಾದ ಖಲಿಸ್ತಾನ್ ಪರವಾದ ಎಸ್‌ಎಫ್‌ಜೆ ಬೆಂಬಲಿತ ಇಬ್ಬರು ಶಂಕಿತರನ್ನು ಸೈಬರ್ ಸೆಲ್ ಬಂಧಿಸಿದೆ ಎಂದು ಗುಜರಾತ್ ಪೊಲೀಸ್ ಕ್ರೈಂ ಬ್ರಾಂಚ್ ಡಿಸಿಪಿ ಚೈತನ್ಯ ಮಾಂಡ್ಲಿಕ್ ಹೇಳಿದ್ದಾರೆ.
2 suspects of pro-#Khalistan group held for threatening to disrupt #INDvsAUS test match from #MadhyaPradesh#IndVsAus2023 #SikhForJustice #SFJ #ChaitanyaMandlik #DCP #CrimeBranch pic.twitter.com/2mkVjQXZsU
— Ritam English (@EnglishRitam) March 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.