ಮುಂಬಯಿ: ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಸುರೇಖಾ ಯಾದವ್ ಅವರು ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸುತ್ತಿದ್ದಾರೆ. ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಅವರಾಗಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವನಿ ವೈಷ್ಣವ್ ಅವರು ಟ್ವಿಟ್ ಮೂಲಕ ಸುರೇಖಾ ಸಾಧನೆಯನ್ನು ಕೊಂಡಾಡಿದ್ದಾರೆ. “ವಂದೇ ಭಾರತ್ – ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಶ್ರೀಮತಿ ಸುರೇಖಾ ಯಾದವ್ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್” ಎಂದಿದ್ದಾರೆ.
ಸೋಮವಾರ ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಸುರೇಖಾ ಯಾದವ್ ಅವರು ಪೈಲಟ್ ಮಾಡಿದರು. ರೈಲು ಮಾರ್ಚ್ 13 ರಂದು ಸರಿಯಾದ ಸಮಯಕ್ಕೆ ಸೊಲ್ಲಾಪುರ ನಿಲ್ದಾಣದಿಂದ ಹೊರಟಿತು ಮತ್ತು ನಿಗದಿತ ಸಮಯಕ್ಕೆ ಆಗಮನಕ್ಕೆ ಐದು ನಿಮಿಷಗಳ ಮೊದಲು CSMT ತಲುಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
450-ಕಿಮೀ ದೂರದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಸುರೇಖಾ ಯಾದವ್ ಅವರನ್ನು CSMT ನಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 8 ರಲ್ಲಿ ಸನ್ಮಾನಿಸಲಾಯಿತು.
Vande Bharat – powered by Nari Shakti.
Smt. Surekha Yadav, the first woman loco pilot of Vande Bharat Express. pic.twitter.com/MqVjpgm4EO
— Ashwini Vaishnaw (@AshwiniVaishnaw) March 13, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.