News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುಂದಿನ ವಾರ ರಷ್ಯಾಗೆ ಚೀನಾ ಅಧ್ಯಕ್ಷ ಭೇಟಿ: ಉಕ್ರೇನ್‌ ಯುದ್ಧದ ಬಳಿಕದ ಮೊದಲ ಭೇಟಿ

ಮಾಸ್ಕೋ: ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೋಮವಾರದಿಂದ ಬುಧವಾರದವರೆಗೆ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.

ರಷ್ಯಾ-ಉಕ್ರೇನ್ ಯುದ್ಧವು ಎರಡನೇ ವರ್ಷಕ್ಕೆ ಕಾಲಿಟ್ಟ ನಂತರ ಮಾಸ್ಕೋಗೆ ಕ್ಸಿ ಅವರ ಮೊದಲ ಭೇಟಿ ಇದಾಗಿದೆ. ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್‌ಬಿನ್ ಶುಕ್ರವಾರ ಬೀಜಿಂಗ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಸಿ ಅವರು ಅಧ್ಯಕ್ಷ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಂಬಂಧಗಳು ಮತ್ತು ಸಾಮಾನ್ಯ ಕಾಳಜಿಯ ಪ್ರಮುಖ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ, ಕಾರ್ಯತಂತ್ರದ ಸಹಕಾರ ಮತ್ತು ಪ್ರಾಯೋಗಿಕ ಸಹಕಾರವನ್ನು ಉತ್ತೇಜಿಸುತ್ತಾರೆ. ಎರಡು ದೇಶಗಳು ದ್ವಿಪಕ್ಷೀಯ ಸಂಬಂಧಗಳ ಅಭಿವೃದ್ಧಿಗೆ ಹೊಸ ಪ್ರಚೋದನೆಯನ್ನು ನೀಡುತ್ತವೆ ಎಂದು ಮಾಹಿತಿ ನೀಡಿದ್ದಾರೆ.

ಪಾಶ್ಚಿಮಾತ್ಯ ಸರ್ಕಾರಗಳು ಉಕ್ರೇನ್‌ನಲ್ಲಿ ಯುದ್ಧವನ್ನು ನಿಲ್ಲಿಸಲು ಚೀನಾ ಸಾಕಷ್ಟು ಪ್ರಯತ್ನ ಮಾಡುತ್ತಿಲ್ಲ ಎಂದು ಟೀಕಿಸುತ್ತಿರುವ ನಡುವೆಯೇ ಈ ಭೇಟಿ ನಡೆಯುತ್ತಿದೆ.

ವಿಶ್ಲೇಷಕರ ಪ್ರಕಾರ, ಕ್ಸಿ ಅವರ ರಷ್ಯಾ ಭೇಟಿಯನ್ನು ರಷ್ಯಾದ ಅಧ್ಯಕ್ಷರಿಗೆ ಬೆಂಬಲವಾಗಿ ನೋಡಬಹುದು, ಕ್ಸಿ ಅವರು ಚೀನಾದ ಅಧ್ಯಕ್ಷರಾಗಿ ತಮ್ಮ ಮೂರನೇ ಅಧಿಕಾರಾವಧಿಯನ್ನು ಪ್ರಾರಂಭಿಸಿರುವ ಸಂದರ್ಭದಲ್ಲಿ ಭೇಟಿ ನಡೆಯುತ್ತಿರುವುಉ ಮಹತ್ವ ಪಡೆದುಕೊಂಡಿದೆ.

ಚೀನಾದ ಉನ್ನತ ರಾಜತಾಂತ್ರಿಕ ವಾಂಗ್ ಯಿ ಕಳೆದ ತಿಂಗಳು ಮಾಸ್ಕೋದಲ್ಲಿ ಪುಟಿನ್ ಅವರನ್ನು ಭೇಟಿಯಾಗಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top