ನವದೆಹಲಿ: ಯುಗಾದಿ ಹಬ್ಬವನ್ನು ಇಂದು ದೇಶಾದ್ಯಂತ ಜನತೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರ ಶುಭಾಶಯಗಳನ್ನು ಕೋರಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡಿರುವ ಮೋದಿ, ಯುಗಾದಿ ಹಬ್ಬದ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡಿರುವ ಈ ಹಬ್ಬವು, ಮುಂಬರುವ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಶೋಭಾಕೃತ್ ನಾಮ ಸಂವತ್ಸರವು ನಿಮ್ಮೆಲ್ಲರ ಬಾಳಿನಲ್ಲಿ ಹೊಸ ಭರವಸೆಯನ್ನು ನೀಡಿ, ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ಮೂಡಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟ್ವೀಟ್ ಮಾಡಿ, ಎಲ್ಲಾ ದೇಶವಾಸಿಗಳಿಗೆ ಚೈತ್ರ ಶುಕ್ಲಾದಿ, ಯುಗಾದಿ, ಗುಡಿ-ಪಡ್ವಾ, ಚೇತಿ-ಚಾಂದ್, ನವ್ರೆಹ್ ಮತ್ತು ಸಜಿಬು-ಚೆರೋಬಾದ ಶುಭಾಶಯಗಳನ್ನು ಕೋರುತ್ತೇನೆ. ಹೊಸ ವರ್ಷದ ಆಗಮನದಂದು ಆಚರಿಸಲಾಗುವ ಈ ವಿವಿಧ ಹಬ್ಬಗಳು ನಮ್ಮ ಸಂಸ್ಕೃತಿಯ ವಾಹಕ. ಈ ಪವಿತ್ರ ಹಬ್ಬಗಳ ಸಂದರ್ಭದಲ್ಲಿ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ಬಯಸುತ್ತೇನೆ ಎಂದು ಹೇಳಿದ್ದಾರೆ.
ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯ ! pic.twitter.com/SEYqoPUsHl
— Narendra Modi (@narendramodi) March 22, 2023
ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಶೋಭಾಕೃತ್ ನಾಮ ಸಂವತ್ಸರವು ನಿಮ್ಮೆಲ್ಲರ ಬಾಳಿನಲ್ಲಿ ಹೊಸ ಭರವಸೆಯನ್ನು ನೀಡಿ, ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ಮೂಡಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/VtNKAi97kj
— Basavaraj S Bommai (@BSBommai) March 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.