ನವದೆಹಲಿ: ದೆಹಲಿ ಹಣಕಾಸು ಸಚಿವ ಕೈಲಾಶ್ ಗಹ್ಲೋಟ್ ಅವರು ಇಂದು ದೆಹಲಿ ವಿಧಾನಸಭೆಯಲ್ಲಿ 2023-24 ರ ಹಣಕಾಸು ವರ್ಷಕ್ಕೆ 78,800 ಕೋಟಿ ರೂಪಾಯಿಗಳ ಬಜೆಟ್ ಅನ್ನು ಮಂಡಿಸಿದರು. ಬಜೆಟ್ G-20 ಶೃಂಗಸಭೆಯ ಸಿದ್ಧತೆಗಳ ಭಾಗವಾಗಿ ಸಾರಿಗೆ ಮತ್ತು ಮೂಲಸೌಕರ್ಯಗಳ ಮೇಲೆ ಪ್ರಮುಖವಾಗಿ ಕೇಂದ್ರೀಕರಿಸಿದೆ.
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟಿದ್ದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ರಾಜೀನಾಮೆ ನೀಡಿದ ನಂತರ ಗಹ್ಲೋಟ್ ಅವರು ಹಣಕಾಸು ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡು ಇದೇ ಮೊದಲ ಬಾರಿಗೆ ಬಜೆಟ್ ಮಂಡಿಸಿದರು.
”ನನ್ನ ಅಣ್ಣನಂತಿರುವ ಮನೀಶ್ ಸಿಸೋಡಿಯಾ ಅವರು ಈ ಬಜೆಟ್ ಮಂಡಿಸಿದ್ದರೆ ನನಗೆ ಹೆಚ್ಚು ಖುಷಿಯಾಗುತ್ತಿತ್ತು. ಬಜೆಟ್ ಜನರ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳ ಅಭಿವ್ಯಕ್ತಿಯಾಗಿದೆ” ಎಂದು ಗಹ್ಲೋಟ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಮುಂದಿನ 10 ವರ್ಷಗಳಲ್ಲಿ 1,400 ಕಿಲೋಮೀಟರ್ ರಸ್ತೆಗಳ ಮೇಲ್ದರ್ಜೆಗೆ 19,466 ಕೋಟಿ ರೂ.ಗಳೊಂದಿಗೆ ಬಜೆಟ್ ಅನ್ನು ಸ್ವಚ್ಛ, ಸುಂದರ ಮತ್ತು ಆಧುನಿಕ ದೆಹಲಿಗೆ ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು. ಸರ್ಕಾರವು 2023-24ಕ್ಕೆ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ 2,034 ಕೋಟಿ ರೂ ವ್ಯಯಿಸಲಿದೆ ಎಂದರು.
ಕೇಂದ್ರ ಸರ್ಕಾರ ಬಜೆಟ್ ಮಂಡನೆಗೆ ಅವಕಾಶ ನೀಡುತ್ತಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ್ದರು. ಆದರೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಜೆಟ್ ಮಂಡನೆಗೆ ಅನುಮೋದನೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.