ಸೂರತ್: 2019ರ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯವು ತಪ್ಪಿತಸ್ಥರೆಂದು ಇಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ, ನಂತರ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ
2019 ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ‘ಮೋದಿ ಉಪನಾಮ’ ಕುರಿತು ಅವರು ಮಾಡಿದ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. “ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನೇ ಯಾಕೆ ಹೊಂದಿರುತ್ತಾರೆ” ಎಂದು ಅವರು ಹೇಳಿದ್ದರು. ಲೋಕಸಭೆ ಚುನಾವಣೆಗೂ ಮುನ್ನ ಅವರು ಈ ಹೇಳಿಕೆ ನೀಡಿದ್ದರು.
ಇಂದು ಸೂರತ್ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾದಾಗ ರಾಹುಲ್ ಗಾಂಧಿ ನ್ಯಾಯಾಲಯದಲ್ಲಿ ಹಾಜರಿದ್ದರು.
ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.
ತೀರ್ಪಿನ ಮೊದಲು, ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಮಾತನಾಡಿ, ನ್ಯಾಯಾಲಯದ ತೀರ್ಪನ್ನು ರಾಹುಲ್ ಗಾಂಧಿ ಗೌರವಿಸುತ್ತಾರೆ ಮತ್ತು ಅವರ ಬೆಂಬಲಕ್ಕೆ ಕಾಂಗ್ರೆಸ್ ನಿಲ್ಲುತ್ತದೆ ಎಂದು ತಿಳಿಸಿದ್ದರು.
Gujarat | Surat District Court sentenced Congress MP Rahul Gandhi to two years of imprisonment in the criminal defamation case filed against him over his alleged 'Modi surname' remark.
He was later granted bail by the court. https://t.co/qmGNBIMTaF
— ANI (@ANI) March 23, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.