ನವದೆಹಲಿ: ರಾಹುಲ್ ಗಾಂಧಿ ಅಸಂಸದೀಯ ನಡವಳಿಕೆಯ ಪ್ರತಿರೂಪವಾಗಿದ್ದು, ಇಂದು ವಯನಾಡ್ ಜನರು ಅವರಿಂದ ಮುಕ್ತರಾಗಿದ್ದಾರೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದರು.
“ರಾಹುಲ್ ಗಾಂಧಿ ಅವರು ಭಾರತದ ಸರ್ಕಾರ, ಕಾನೂನು ಮತ್ತು ಜನರಿಗಿಂತ ತಾನು ದೊಡ್ಡವ ಎಂದು ಭಾವಿಸಿದ್ದಾರೆ” ಎಂದಿದ್ದಾರೆ.
ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಒಂದು ದಿನದ ನಂತರ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಇದರಿಂದ ಕೆರಳಿರುವ ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.