ನವದೆಹಲಿ: ಕೇಂದ್ರ ಸರ್ಕಾರವು ವಾರಣಾಸಿಯಿಂದ ಹಲ್ದಿಯಾವರೆಗೆ ಗಂಗಾ ನದಿಯ ಉದ್ದಕ್ಕೂ 60 ಜೆಟ್ಟಿಗಳನ್ನು ನಿರ್ಮಿಸುತ್ತಿದೆ ಎಂದು ಕೇಂದ್ರ ಹಡಗು ಮತ್ತು ಜಲಮಾರ್ಗ ರಾಜ್ಯ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ.
ಕೇಂದ್ರವು ಮಾರ್ಚ್ 26 ರಂದು ಪಶ್ಚಿಮ ಬಂಗಾಳದ ಕಲ್ಯಾಣಿ ಮತ್ತು ಟ್ರಿಬೆನಿಯಲ್ಲಿ ನದಿಯ ಎರಡೂ ಬದಿಯಲ್ಲಿ ನಾಲ್ಕು ಜೆಟ್ಟಿಗಳನ್ನು ಉದ್ಘಾಟಿಸಿದೆ. ಇದಕ್ಕೆ 8 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ದೇಶಾದ್ಯಂತ 118 ಜಲಮಾರ್ಗಗಳನ್ನು ಸಹ ಅಭಿವೃದ್ಧಿಪಡಿಸಲಾಗುತ್ತಿದೆ ಎಂದಿದ್ದಾರೆ.
“118 ಹೊಸ ಜಲಮಾರ್ಗಗಳು ದೂರವನ್ನು ಕಡಿಮೆ ಮಾಡುತ್ತದೆ, ಸಾರಿಗೆ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ಸಣ್ಣ ವ್ಯಾಪಾರಿಗಳು, ದೈನಂದಿನ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಆರ್ಥಿಕತೆಯನ್ನು ಬಲಪಡಿಸುತ್ತದೆ” ಎಂದು ತಿಳಿಸಿದ್ದಾರೆ.
ಬಹುಕಾಲದಿಂದ ನಿರ್ಲಕ್ಷಿಸಲಾಗಿದ್ದ ದೇಶದ ಮೂಲಸೌಕರ್ಯ ಅಭಿವೃದ್ಧಿಯತ್ತ ಪ್ರಧಾನಿ ನರೇಂದ್ರ ಮೋದಿ ಗಮನಹರಿಸುತ್ತಿದ್ದಾರೆ ಎಂದು ಹೇಳಿದರು.
“ರಾಜ್ಯಕ್ಕೆ ಅಗತ್ಯವಿರುವಂತೆ ಮೂಲಸೌಕರ್ಯ ಅಭಿವೃದ್ಧಿಗೆ ಪಶ್ಚಿಮ ಬಂಗಾಳ ಸರ್ಕಾರದ ಸಹಕಾರವನ್ನು ನಾವು ಬಯಸುತ್ತೇವೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.