ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ(ಇಪಿಎಸ್) ಅವರನ್ನು ಎಐಎಡಿಎಂಕೆ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅವರ ಪ್ರತಿಸ್ಪರ್ಧಿ ಒ ಪನ್ನೀರಸೆಲ್ವಂ(ಒಪಿಎಸ್)ನೇತೃತ್ವದ ಬಣ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಎಐಎಡಿಎಂಕೆ ಚುನಾವಣಾ ಆಯುಕ್ತರಾದ ನಾಥಮ್ ಆರ್ ವಿಶ್ವನಾಥನ್ ಮತ್ತು ಪೊಲ್ಲಾಚಿ ವಿ ಜಯರಾಮನ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ 68 ವರ್ಷದ ಪಳನಿಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ಘೋಷಿಸಿದ್ದಾರೆ.
ಪಕ್ಷದ ಸಂಸ್ಥಾಪಕ ಎಂಜಿ ರಾಮಚಂದ್ರನ್(ಎಂಜಿಆರ್) ಮತ್ತು ದಿವಂಗತ ಪಕ್ಷದ ವರಿಷ್ಠೆ ಜೆ ಜಯಲಲಿತಾ ಅವರು ಹೊಂದಿದ್ದ ಪಕ್ಷದ ಸರ್ವಶಕ್ತ ಹುದ್ದೆಯಾಗಿರುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಪಕ್ಷದ ಕಾರ್ಯಕರ್ತರಿಗೆ ಹೃದಯಪೂರ್ವಕವಾಗಿ ಧನ್ಯವಾದ ಅರ್ಪಿಸುವುದಾಗಿ ಪಳನಿಸ್ವಾಮಿ ಹೇಳಿದ್ದಾರೆ.
ಮದ್ರಾಸ್ ಹೈಕೋರ್ಟ್ ತೀರ್ಪಿನಿಂದ ಎಐಎಡಿಎಂಕೆ ಪಕ್ಷದ ಪನ್ನೀರಸೆಲ್ವಂ ಬಣಕ್ಕೆ ತೀವ್ರ ಹಿನ್ನೆಡೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.