ನವದೆಹಲಿ: ನಮೀಬಿಯಾದಿಂದ ಭಾರತಕ್ಕೆ ಚೀತಾ ಮರುಪರಿಚಯ ಕಾರ್ಯಕ್ರಮದಡಿ ಕರೆತರಲಾದ ಚೀತಾಗಳಲ್ಲಿ ಒಂದು ನಾಲ್ಕು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಇಂದು ಹೇಳಿದ್ದಾರೆ.
ಅವರು “ಅಮೃತ್ ಕಾಲ ಸಮಯದಲ್ಲಿ ಭಾರತದ ವನ್ಯಜೀವಿ ಸಂರಕ್ಷಣಾ ಇತಿಹಾಸದಲ್ಲಿ ಮಹತ್ವದ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ 2022 ರ ಸೆಪ್ಟೆಂಬರ್ 17 ರಂದು ಭಾರತಕ್ಕೆ ಸ್ಥಳಾಂತರಗೊಂಡ ಚೀತಾಗಳಲ್ಲಿ ಒಂದಕ್ಕೆ ನಾಲ್ಕು ಮರಿಗಳು ಜನಿಸಿದವು ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಚೀತಾಗಳನ್ನು ಭಾರತಕ್ಕೆ ಮರಳಿ ತರುವಲ್ಲಿ ಮತ್ತು ಹಿಂದೆ ಮಾಡಿದ ತಪ್ಪನ್ನು ಸರಿಪಡಿಸಿದ ಪ್ರಾಜೆಕ್ಟ್ ಚೀತಾದ ಪ್ರಯತ್ನಗಳ ಹಿಂದೆ ಇರುವ ಸಂಪೂರ್ಣ ತಂಡವನ್ನು ಸಚಿವರು ಅಭಿನಂದಿಸಿದ್ದಾರೆ.
ಮಹತ್ವಾಕಾಂಕ್ಷೆಯ ಚೀತಾ ಮರುಪರಿಚಯ ಕಾರ್ಯಕ್ರಮದ ಅಡಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಸೆಪ್ಟೆಂಬರ್ 17 ರಂದು ತಮ್ಮ 72 ನೇ ಹುಟ್ಟುಹಬ್ಬದಂದು ನಮೀಬಿಯಾದಿಂದ ಮಧ್ಯಪ್ರದೇಶದ ಕುನೊ ಆವರಣಕ್ಕೆ ಐದು ಹೆಣ್ಣು ಮತ್ತು ಮೂರು ಗಂಡು ಚೀತಾಗಳ ಮೊದಲ ಬ್ಯಾಚ್ ಅನ್ನು ಬಿಡುಗಡೆ ಮಾಡಿದರು.
Congratulations 🇮🇳
A momentous event in our wildlife conservation history during Amrit Kaal!
I am delighted to share that four cubs have been born to one of the cheetahs translocated to India on 17th September 2022, under the visionary leadership of PM Shri @narendramodi ji. pic.twitter.com/a1YXqi7kTt
— Bhupender Yadav (@byadavbjp) March 29, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.