ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ‘ಗಮನಿಸುತ್ತಿದ್ದೇವೆ’ ಎಂದು ಜರ್ಮನಿ ಹೇಳಿದ ನಂತರ, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಭಾರತವು ವಿದೇಶಿ ಪ್ರಭಾವವನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿಯವರ ಕಿರುಕುಳದ ಮೂಲಕ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಹೇಗೆ ರಾಜಿ ಮಾಡಿಕೊಳ್ಳಲಾಗುತ್ತಿದೆ ಎಂಬುದನ್ನು ಗಮನಿಸಿದ ಜರ್ಮನಿಯ ವಿದೇಶಾಂಗ ಸಚಿವಾಲಯಕ್ಕೆ ಧನ್ಯವಾದ ಎಂದು ಹೇಳಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಮಾಡಿರುವ ಟ್ವಿಟ್ನ ಸ್ಕ್ರೀನ್ಶಾಟ್ ಅನ್ನು ಹಂಚಿಕೊಂಡ ರಿಜಿಜು, ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪಕ್ಕಾಗಿ ವಿದೇಶಿ ಶಕ್ತಿಗಳನ್ನು ಆಹ್ವಾನಿಸಿದ ರಾಹುಲ್ ಗಾಂಧಿಗೆ ಧನ್ಯವಾದ ಎಂದು ಟಾಂಗ್ ನೀಡಿದ್ದಾರೆ.
“ನೆನಪಿಡಿ, ಭಾರತೀಯ ನ್ಯಾಯಾಂಗವು ವಿದೇಶಿ ಹಸ್ತಕ್ಷೇಪದಿಂದ ಪ್ರಭಾವಿತವಾಗುವುದಿಲ್ಲ. ಭಾರತವು ಇನ್ನು ಮುಂದೆ ‘ವಿದೇಶಿ ಪ್ರಭಾವ’ವನ್ನು ಸಹಿಸುವುದಿಲ್ಲ ಏಕೆಂದರೆ ನಮ್ಮ ಪ್ರಧಾನಿ ʼ ಶ್ರೀ ನರೇಂದ್ರ ಮೋದಿ ಜಿʼ ಎಂದು ರಿಜಿಜು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಅನುರಾಗ್ ಠಾಕೂರ್ ಅವರು ಟ್ವಿಟ್ ಮಾಡಿ, “ಇದು ರಾಷ್ಟ್ರಕ್ಕೆ ಅವಮಾನ, ಐಎನ್ಸಿ ಮತ್ತು ರಾಹುಲ್ ಗಾಂಧಿ ಅವರು ದೇಶದೊಳಗೆ ಭಾರತದ ಪ್ರಜಾಪ್ರಭುತ್ವ, ರಾಜಕೀಯ ಮತ್ತು ಕಾನೂನು ಹೋರಾಟವನ್ನು ನಂಬುವುದಿಲ್ಲ, ಆದ್ದರಿಂದ, ನಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ವಿದೇಶಿ ಶಕ್ತಿಗಳನ್ನು ಆಹ್ವಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ನರೇಂದ್ರ ಮೋದಿಯವರ ನೇತೃತ್ವದ ನವ ಭಾರತವು ಯಾವುದೇ ವಿದೇಶಿ ಹಸ್ತಕ್ಷೇಪವನ್ನು ಸಹಿಸುವುದಿಲ್ಲ ಎಂದಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಸಿಂಗ್ ಟ್ವೀಟ್ ಬಗ್ಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.