ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ನಟ ಸುದೀಪ್ ಮುಂತಾದವರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು
ಬಳಿಕ ಮಾತನಾಡಿದ ಅವರು, ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸತತ 15 ವರ್ಷಗಳಿಂದ ಆಶೀರ್ವಾದ ಮಾಡಿದ್ದೀರಿ. ಶಿಗ್ಗಾಂವಿ ಕ್ಷೇತ್ರದ ಜನರ ಪ್ರೀತಿಗೆ ನಾನು ಸೋತಿದ್ದೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಿದ್ದೇನೆ. ನಾನು ಮುಖ್ಯಮಂತ್ರಿ ಆಗಿ ವಿದ್ಯಾರ್ಥಿಗಳು, ರೈತರಿಗಾಗಿ ಯೋಜನೆ ಜಾರಿ ಮಾಡಿದ್ದೇನೆ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಕ್ಷೇತ್ರ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೋಹ ಇತ್ತು. ನಾನು ಓಡಿ ಹೋಗುವ ಮುಖ್ಯಮಂತ್ರಿ ಅಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ. ನಾನು ತೀರುಕೊಂಡ ಮೇಲೆ ಶಿಗ್ಗಾಂವಿಯಲ್ಲೇ ಮಣ್ಣು ಮಾಡಬೇಕು ಎಂದು ಹೇಳಿದರು.
ಬಳಿಕ ಮಾತನಾಡಿದ ನಟ ಕಿಚ್ಚ ಸುದೀಪ್ ಅವರು, ಬೊಮ್ಮಾಯಿ ಅವರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.