ಬೆಂಗಳೂರು: ಪಂಜಾಬಿನಲ್ಲಿ ಖಲಿಸ್ತಾನ್ ಪರವಾದ ಅಲೆ ಇಲ್ಲ ಮತ್ತು ಕೇಂದ್ರ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪಂಜಾಬ್ ಸರ್ಕಾರ ಉತ್ತಮ ಕೆಲಸ ಮಾಡಿದೆ ಮತ್ತು ಕೇಂದ್ರವು ಸಹಕಾರ ನೀಡುತ್ತಿದೆ ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
“ಖಾಲಿಸ್ತಾನ ಪರವಾದ ಯಾವುದೇ ಅಲೆಯಿಲ್ಲ. ಅನೇಕ ಬಾರಿ, ಕೆಲವರು ಈ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ, ಆದರೆ ಸರ್ಕಾರಗಳು ತಮ್ಮ ಕೆಲಸವನ್ನು ಮಾಡಿವೆ. ಪಂಜಾಬ್ ಸರ್ಕಾರವು ಉತ್ತಮ ಕೆಲಸ ಮಾಡಿದೆ, ಕೇಂದ್ರವು ಬೆಂಬಲ ನೀಡಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ” ಎಂದು ಶಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಾ, ಅಮೃತಪಾಲ್ ಸಿಂಗ್ ಬಂಧನದ ಬಗ್ಗೆ ಮತ್ತು ಅವನು ದೀರ್ಘಕಾಲ ತಲೆಮರೆಸಿಕೊಂಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. “ಬಂಧನಕ್ಕೆ ಸ್ವಲ್ಪ ಸಮಯ ಆಗಬಹುದು, ಅವನು ಮೊದಲು ಮುಕ್ತವಾಗಿ ತಿರುಗುತ್ತಿದ್ದ, ಆದರೆ ಈಗ ಅವನು ತನ್ನ ಚಟುವಟಿಕೆಗಳನ್ನು ಮುಂದುವರಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.
ಕಳೆದ ತಿಂಗಳು ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ಮತ್ತು ಯುಕೆ ಮತ್ತು ಸ್ಯಾನ್ ಫ್ರಾನ್ಸಿಸ್ಕೋದ ಕಾನ್ಸುಲೇಟ್ ಮೇಲೆ ನಡೆದ ದಾಳಿಯನ್ನು ಉಲ್ಲೇಖಿಸಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಭಾರತೀಯ ಹೈಕಮಿಷನ್ಗಳ ಮೇಲೆ ಯಾವುದೇ ದಾಳಿಯನ್ನು ಸಹಿಸುವುದಿಲ್ಲ ಮತ್ತು ಭಾರತೀಯ ಕಾನೂನುಗಳಿಗೆ ಅನುಗುಣವಾಗಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.