ನವದೆಹಲಿ: ಯಾವುದೇ ದೂರು ನೀಡದಿದ್ದರೂ ದ್ವೇಷದ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಈ ಮೂಲಕ ತನ್ನ 2022ರ ಆದೇಶದ ವ್ಯಾಪ್ತಿಯನ್ನು ಮೂರು ರಾಜ್ಯಗಳ ಆಚೆಗೂ ವಿಸ್ತರಿಸಿದೆ.
ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠವು ದ್ವೇಷ ಭಾಷಣಗಳನ್ನು “ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಗಂಭೀರ ಅಪರಾಧ” ಎಂದು ಬಣ್ಣಿಸಿದೆ. 2022 ರ ಅಕ್ಟೋಬರ್ 21 ರ ಆದೇಶವು ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಮತ್ತು ಪ್ರಕರಣಗಳನ್ನು ದಾಖಲಿಸುವಲ್ಲಿ ಯಾವುದೇ ವಿಳಂಬವನ್ನು ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಪೀಠವು ಎಚ್ಚರಿಸಿದೆ.
“ಧರ್ಮದ ಹೆಸರಿನಲ್ಲಿ ನಾವು ಎಲ್ಲಿಗೆ ತಲುಪಿದ್ದೇವೆ? ನಾವು ಧರ್ಮವನ್ನು ಯಾವುದಕ್ಕೆ ಇಳಿಸಿದ್ದೇವೆ ಎಂಬುದು ನಿಜಕ್ಕೂ ದುರಂತ” ಎಂದು ಸುಪ್ರೀಂ ಕೋರ್ಟ್ ಹೇಳಿದೆ ಮತ್ತು ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ್ಗೆ ದ್ವೇಷದ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈ ಹಿಂದೆ ಸೂಚಿಸಿದ್ದನ್ನು ಇದೀಗ ಎಲ್ಲ ರಾಜ್ಯಗಳಿಗೂ ಅನ್ವಯವಾಗುವಂತೆ ಮಾಡಿದೆ.
ಭಾರತದ ಸಂವಿಧಾನವು ಜಾತ್ಯತೀತ ರಾಷ್ಟ್ರವನ್ನು ಕಲ್ಪಿಸುತ್ತದೆ ಎಂದು ಪ್ರತಿಪಾದಿಸಿದ ನ್ಯಾಯಾಲಯ, ದೂರು ದಾಖಲಾಗುವವರೆಗೆ ಕಾಯದೆ ಅಪರಾಧಿಗಳ ವಿರುದ್ಧ ತ್ವರಿತವಾಗಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.