ಬೆಳಗಾವಿ: ಕರ್ನಾಟಕದಲ್ಲಿ ಚುನಾವಣಾ ಬಿಸಿ ತಾರಕಕ್ಕೇರಿದೆ. ಮತಗಟ್ಟೆಗೆ ಆಗಮಿಸಲು ಸಾಧ್ಯವಾಗದ ವೃದ್ಧರಿಗೆ, ದಿವ್ಯಾಂಗರಿಗೆ ಚುನಾವಣಾ ಅಧಿಕಾರಿಗಳು ಮನೆಗೆ ಬಂದು ಮತ ಪಡೆಯುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಇಂಗಳಿ ಗ್ರಾಮದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಶತಾಯುಷಿಯೊಬ್ಬರು ಮನೆಯಿಂದಲೇ ಮತ ಚಲಾಯಿಸುವ ಆಯ್ಕೆ ಮಾಡಿಕೊಂಡಿದ್ದಾರೆ. ಇಂಗಳಿ ಗ್ರಾಮದ ಮಹಾದೇವ ಮಹಾಲಿಂಗ್ ಮಾಲಿ ಎಂಬುವರು 103 ವರ್ಷ ನಾಲ್ಕು ತಿಂಗಳು ವಯಸ್ಸಿನವರು. ತಮ್ಮ ಮನೆಯಲ್ಲಿ ಹಾಸಿಗೆಯ ಮೇಲೆ ಕುಳಿತೇ ಅವರು ತಮ್ಮ ಮತದಾನ ಹಕ್ಕು ಚಲಾಯಿಸಿದ್ದಾರೆ. ಈ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
“ಶ್ರೀ ಮಹಾದೇವ ಮಹಾಲಿಂಗ್ ಮಾಲಿ ಅವರು ಪ್ರಜಾಪ್ರಭುತ್ವವನ್ನು ಬಲಪಡಿಸುವ ಬದ್ಧತೆಯಿಂದ ಹಲವಾರು ಜನರಿಗೆ ಸ್ಫೂರ್ತಿ ನೀಡಿದ್ದಾರೆ. ಇದು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಆಚರಿಸುವ ಕರ್ನಾಟಕದ ಸಂಸ್ಕೃತಿಗೆ ಅನುಗುಣವಾಗಿದೆ” ಎಂದು ಟ್ವಿಟ್ ಮಾಡಿದ್ದಾರೆ
ಅಧಿಕಾರಿಗಳು ಮತಯಂತ್ರ ಪ್ರತಿ ಮತ್ತು ಸ್ಟೀಲ್ ಮತಪೆಟ್ಟಿಗೆಯನ್ನು ಅವರ ಮನೆಗೆ ಕೊಂಡೊಯ್ದರು. ಮನೆಯಿಂದಲೇ ಮತದಾನ ಮಾಡುವ ವಿಧಾನವನ್ನು ಅವರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಮಾಳಿ ಈ ಹಿಂದೆ ಬ್ಯಾಲೆಟ್ ಪೇಪರ್ ಬಳಸಿ ಮತದಾನ ಮಾಡಿದ್ದನ್ನು ಸ್ಮರಿಸಿದರು.
ಇದೇ ವೇಳೆ ಇಡೀ ಪ್ರಕ್ರಿಯೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಿಸಲಾಯಿತು.
ಸಹಾಯಕ ಆಯುಕ್ತ ಮಾಧವ ಗಿಟ್ಟೆ ಹಾಗೂ ಇತರೆ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ 1,350 ಕ್ಕೂ ಹೆಚ್ಚು ಶತಾಯುಷಿಗಳಿದ್ದು, ಎಲ್ಲರಿಗೂ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗುವುದು ಎಂದು ಗಿಟ್ಟೆ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.