ಬಳ್ಳಾರಿ: ಇಂದು ಕರ್ನಾಟಕದ ಬಳ್ಳಾರಿಯಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷವು ತನ್ನ ಮತಬ್ಯಾಂಕ್ ಉಳಿಸಿಕೊಳ್ಳಲು ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಭಯೋತ್ಪಾದನೆಯ ಪಿತೂರಿಯನ್ನು ಬಹಿರಂಗಪಡಿಸುವ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಆರೋಪಿಸಿದರು.
ಚಲನಚಿತ್ರವನ್ನು ನಿಷೇಧಿಸಲು ಪ್ರಯತ್ನಿಸುವ ಮೂಲಕ ಭಯೋತ್ಪಾದನೆಯನ್ನು ಬೆಂಬಲಿಸುವ ವ್ಯಕ್ತಿಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.
“ಬಾಂಬ್ಗಳು, ಬಂದೂಕುಗಳು ಮತ್ತು ಪಿಸ್ತೂಲ್ಗಳು ಸಾಕಷ್ಟು ಸದ್ದು ಮಾಡುತ್ತವೆ, ಆದರೆ ಸಮಾಜವನ್ನು ಒಳಗಿನಿಂದ ಟೊಳ್ಳಾಗಿಸುವ ಭಯೋತ್ಪಾದಕ ಸಂಚಿನ ಬಗ್ಗೆ ಯಾವುದೇ ಸದ್ದು ಇಲ್ಲ. ಈ ರೀತಿಯ ಭಯೋತ್ಪಾದನೆಯ ಬಗ್ಗೆ ನ್ಯಾಯಾಲಯವೂ ಕಳವಳ ವ್ಯಕ್ತಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇಂತಹ ಭಯೋತ್ಪಾದಕರ ಸಂಚು ಆಧರಿಸಿದ ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕಾಂಗ್ರೆಸ್ ಕುಹಕವಾಡುತ್ತಿದೆ. ಭಯೋತ್ಪಾದನೆಯ ಕುರಿತು ನಿರ್ಮಿಸಲಾದ ಚಿತ್ರವನ್ನು ವಿರೋಧಿಸುವ ಮತ್ತು ಭಯೋತ್ಪಾದಕರ ಕ್ಷಮೆ ಕೇಳುವವರ ಜೊತೆ ಕಾಂಗ್ರೆಸ್ ನಿಂತಿದೆ ಎಂದು ಪ್ರಧಾನಿ ಆರೋಪಿಸಿದ್ದಾರೆ.
“ಕೇರಳ ಸ್ಟೋರಿ’ ಕೇವಲ ಒಂದು ರಾಜ್ಯದಲ್ಲಿ ಭಯೋತ್ಪಾದಕ ಸಂಚುಗಳನ್ನು ಆಧರಿಸಿಲ್ಲ. ಆದರೆ ಕೇರಳದಂತಹ ಸುಂದರ ರಾಜ್ಯದಲ್ಲಿ ಭಯೋತ್ಪಾದಕ ಸಂಚು ಬಹಿರಂಗಗೊಂಡಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.