ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾನುವಾರ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ವಿಶೇಷ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದು, ಸಿನಿಮಾವನ್ನು ಕಣ್ಣು ತೆರೆಸುವ ಸಿನಿಮಾ ಎಂದು ಬಣ್ಣಿಸಿದ್ದಾರೆ.
ಬೆಂಗಳೂರಿನ ಗರುಡಾ ಮಾಲ್ನಲ್ಲಿ ಸಿನಿಮಾ ವೀಕ್ಷಿಸಿದ ನಡ್ಡಾ, ಮದ್ದುಗುಂಡುಗಳಿಲ್ಲದ ಹೊಸ ರೀತಿಯ ಭಯೋತ್ಪಾದನೆ ಚಾಲ್ತಿಯಲ್ಲಿದೆ ಎಂದು ಹೇಳಿದ್ದು, ಚಿತ್ರದಲ್ಲಿ ‘ವಿಷ ಭಯೋತ್ಪಾದನೆ’ಯನ್ನು ಬಯಲಿಗೆಳೆಯಲಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜೆಪಿ ನಡ್ಡಾ, “ಮದ್ದುಗುಂಡುಗಳಿಲ್ಲದ ಹೊಸ ರೀತಿಯ ಭಯೋತ್ಪಾದನೆ ಇದೆ. ‘ದಿ ಕೇರಳ ಸ್ಟೋರಿ’ ವಿಷಕಾರಿ ಭಯೋತ್ಪಾದನೆಯನ್ನು ಬಹಿರಂಗಪಡಿಸುತ್ತದೆ. ಈ ರೀತಿಯ ಭಯೋತ್ಪಾದನೆ ಯಾವುದೇ ರಾಜ್ಯ ಅಥವಾ ಧರ್ಮಕ್ಕೆ ಸಂಬಂಧಿಸಿಲ್ಲ” ಎಂದಿದ್ದಾರೆ.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡಲು ಕರ್ನಾಟಕಕ್ಕೆ ಆಗಮಿಸಿರುವ ನಡ್ಡಾ, ಸಿನಿಮಾ ವೀಕ್ಷಣೆಯ ಬಳಿಕ ಇದೊಂದು ಜಾಗತಿಕ ಕಥೆಯಾಗಿದ್ದು, ಇದನ್ನು ಎಲ್ಲರೂ ನೋಡಲೇಬೇಕು ಎಂದು ಹೇಳಿದ್ದಾರೆ.
ನಮ್ಮ ಸಮಾಜವನ್ನು ಟೊಳ್ಳು ಮಾಡಲು ಎಂತಹ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬುದು ಈ ಚಿತ್ರ ನೋಡಿದ ನಂತರ ನಮ್ಮ ಜನರಿಗೆ ಅರ್ಥವಾಗುತ್ತದೆ. ಈ ಬಗ್ಗೆ ನಾವು ಜಾಗೃತರಾಗಬೇಕು ಎಂದು ಅವರು ಹೇಳಿದರು.
ನಡ್ಡಾ ಅವರು ಕರ್ನಾಟಕ ಘಟಕದ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಚಂದ್ರಶೇಖರ್, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರೊಂದಿಗೆ ಚಲನಚಿತ್ರವನ್ನು ವೀಕ್ಷಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.