ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭಾಷಣದ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಹ್ಯಾಂಡಲ್ ಮಾಡಿದ ಟ್ವೀಟ್ಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ಮತ್ತು ತಿದ್ದುಪಡಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚುನಾವಣಾ ಆಯೋಗವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್ ನೀಡಿದೆ.
ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರನ್ನೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಸೋನಿಯಾ ಗಾಂಧಿ ಅವರು ಬಲವಾದ ಸಂದೇಶವನ್ನು ರವಾನಿಸಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಸಾರ್ವಭೌಮತೆಯ ಪದವನ್ನು ದೇಶಕ್ಕೆ ಸಂಬಂಧಿಸಿದಂತೆ ಮಾತ್ರ ಬಳಕೆ ಮಾಡಲಾಗುತ್ತದೆ ಎಂದು ಬಿಜೆಪಿ ಆರೋಪಿಸಿದೆ
ಬಿಜೆಪಿ ಮುಖಂಡರಾದ ಭೂಪೇಂದರ್ ಯಾದವ್, ಡಾ. ಜಿತೇಂದ್ರ ಸಿಂಗ್, ತರುಣ್ ಚುಗ್, ಅನಿಲ್ ಬಲುನಿ ಮತ್ತು ಓಂ ಪಾಠಕ್ ಅವರು ಸಲ್ಲಿಸಿದ ದೂರನ್ನು ಆಯೋಗವು ನಿನ್ನೆ ಸ್ವೀಕರಿಸಿದೆ.
ಸೋನಿಯಾ ಗಾಂಧಿಯವರ ಕರ್ನಾಟಕ ಸಾರ್ವಭೌಮತ್ವದ ಹೇಳಿಕೆ ಸಂಬಂಧಿಸಿದಂತೆ ಬಿಜೆಪಿಯು ಚುನಾವಣಾ ಆಯೋಗವನ್ನು ಸಂಪರ್ಕಿಸಿ ಈ ವಿಷಯದ ಬಗ್ಗೆ ಕ್ರಮಕ್ಕೆ ಒತ್ತಾಯಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.