ಭುವನೇಶ್ವರ: ಒಡಿಶಾದ ಕಲಹಂಡಿ ಜಿಲ್ಲೆಯ ಕಾಡಿನಲ್ಲಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದ್ದಾಗ ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ, ಡಿಎಸ್ಪಿ ಶ್ರೇಣಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಡಿಜಿಪಿ ಸುನಿಲ್ ಕೆ ಬನ್ಸಾಲ್ ಹೇಳಿದ್ದಾರೆ.
ಗಾಯಗೊಂಡ ಪೊಲೀಸರನ್ನು ಬೋಲಂಗೀರ್ನ ಭೀಮಾ ಭೋಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು. ಕಲಹಂಡಿ-ಕಂಧಮಾಲ್ ಜಿಲ್ಲೆಗಳ ಗಡಿಭಾಗದ ಅರಣ್ಯ ಪ್ರದೇಶಗಳಲ್ಲಿ ಇನ್ನೂ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.