ಟೊಕಿಯೋ: ಜಪಾನ್ನ ಹಿರೋಷಿಮಾದಲ್ಲಿ ಗ್ರೂಪ್ ಆಫ್ ಸೆವೆನ್ (G7) ನಾಯಕರ ಸಮ್ಮೇಳನದ ನೇಪಥ್ಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಮತ್ತು ವಿಯೆಟ್ನಾಂನ ಅಧ್ಯಕ್ಷ ಫಾಮ್ ಮಿನ್ ಚಿನ್ಹ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರು.
ಪ್ರಧಾನ ಮಂತ್ರಿ ಕಚೇರಿ ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿದ್ದು, ಯೂನ್ ಸುಕ್ ಯೆಯೋಲ್ ಮತ್ತು ಮೋದಿ ನಡುವೆ ಯಶಸ್ವಿ ಮಾತುಕತೆ ನಡೆದಿದೆ ಎಂದು ಹೇಳಿದೆ. ಭಾರತ ಮತ್ತು ಕೊರಿಯಾ ಗಣರಾಜ್ಯದ ನಡುವೆ ಬಲವಾದ ಸಾಂಸ್ಕೃತಿಕ ಸಂಬಂಧಗಳು ಮತ್ತು ಉತ್ತಮ ಸಂಬಂಧವಿದೆ. ಅಭಿವೃದ್ಧಿಯ ಪ್ರಮುಖ ಕ್ಷೇತ್ರಗಳಲ್ಲಿ ಈ ಸ್ನೇಹವನ್ನು ಹೇಗೆ ಬಲಪಡಿಸುವುದು ಎಂಬುದರ ಕುರಿತು ಇಂದು ಚರ್ಚೆಯಾಗಿದೆ ಎಂದು ತಿಳಿಸಿದೆ.
ವಿಯೆಟ್ನಾಂ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ ಮೋದಿ, ಪ್ರಾದೇಶಿಕ ಬೆಳವಣಿಗೆಗಳು ಮತ್ತು ಆಸಿಯಾನ್ ಮತ್ತು ಇಂಡೋ-ಪೆಸಿಫಿಕ್ನಲ್ಲಿನ ಸಹಕಾರದ ಬಗ್ಗೆ ಚರ್ಚಿಸಿದರು.
ಜಪಾನಿನಲ್ಲಿ ಶನಿವಾರ ಸಂಜೆಯವರೆಗೆ ಪಿಎಂ ಮೋದಿಯವರು ಸಭೆಗಳ ಸರಣಿಯನ್ನು ನಡೆಸಲಿದ್ದಾರೆ. ಮೇ 24 ರಂದು ಆಸ್ಟ್ರೇಲಿಯಾದಲ್ಲಿ ಮೂರನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆ ಸೇರಿದಂತೆ ಮೂರು ರಾಷ್ಟ್ರಗಳ ಭೇಟಿಯಲ್ಲಿ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.