ಸಿಡ್ನಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಡ್ನಿಯಲ್ಲಿ ದೇಶದ ಉನ್ನತ ಬಹುರಾಷ್ಟ್ರೀಯ ಕಂಪನಿಗಳ ಕಾರ್ಯನಿರ್ವಾಹಕರನ್ನು ಭೇಟಿ ಮಾಡುವ ಮೂಲಕ ತಮ್ಮ ಆಸ್ಟ್ರೇಲಿಯಾ ಪ್ರವಾಸವನ್ನು ಪ್ರಾರಂಭಿಸಿದರು. ವಿಕ್ಟೋರಿಯಾದ ಮೆಲ್ಬೋರ್ನ್ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆಸ್ಟ್ರೇಲಿಯನ್ಸೂಪರ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಲ್ ಶ್ರೋಡರ್ ಅವರನ್ನು ಕೂಡ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಭೇಟಿಯಾದರು.
ವಿಶ್ವದಲ್ಲಿ ವಿದೇಶಿ ಹೂಡಿಕೆಗಳಿಗೆ ಹೆಚ್ಚು ಆದ್ಯತೆಯ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿರುವ ಭಾರತದ ಸಾಮರ್ಥ್ಯಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು ಮತ್ತು ಆಸ್ಟ್ರೇಲಿಯನ್ಸೂಪರ್ ಅನ್ನು ಭಾರತದೊಂದಿಗೆ ಪಾಲುದಾರಿಕೆ ಮಾಡಲು ಆಹ್ವಾನಿಸಿದರು.
ಪಿಎಂ ಮೋದಿ ಅವರೊಂದಿಗಿನ ಭೇಟಿಯ ನಂತರ ಪ್ರತಿಕ್ರಿಯಿಸಿದ ಶ್ರೋಡರ್ ಅವರು, “ನಮ್ಮದು ಅತ್ಯಂತ ಪ್ರಭಾವಶಾಲಿ ಮಾತುಕತೆಯಾಗಿತ್ತು. ಪ್ರಧಾನಿ ಮೋದಿ ವ್ಯವಹಾರವನ್ನು ಅರ್ಥಮಾಡಿಕೊಳ್ಳುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಅತ್ಯಂತ ಪ್ರಭಾವಶಾಲಿ ವ್ಯಕ್ತಿ. ಪ್ರಧಾನಿ ಅವರು ಭಾರತದ ಬಗ್ಗೆ ತಮಗಿರುವ ಕನಸುಗಳ ಬಗ್ಗೆ ಮಾತನಾಡಿದರು. ಆಸ್ಟ್ರೇಲಿಯನ್ ಸೂಪರ್ ಸಹಜವಾಗಿ ಭಾರತದಲ್ಲಿ ಹೂಡಿಕೆ ಮಾಡುತ್ತದೆ ಮತ್ತು ನಿರ್ದಿಷ್ಟವಾಗಿ ಭಾರತೀಯ ಮೂಲಸೌಕರ್ಯ ನಿಧಿಯಲ್ಲಿ ಹೂಡಿಕೆ ಮಾಡುತ್ತದೆ ಮತ್ತು ನಾವು ಉತ್ತಮ ಸಾಧನೆ ಮಾಡಿದ್ದೇವೆ. ಭಾರತದಲ್ಲಿ ಹೂಡಿಕೆ ಮಾಡುವ ಅನುಭವ ಹೊಂದಿದ್ದೇವೆ” ಎಂದಿದ್ದಾರೆ,
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆಯ ಪ್ರಕಾರ, ಪ್ರಧಾನಿ ಮೋದಿ ಅವರು ವಿಶ್ವದ ವಿದೇಶಿ ಹೂಡಿಕೆಗಳಿಗೆ ಹೆಚ್ಚು ಆದ್ಯತೆಯ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿರುವ ಭಾರತದ ಸಾಮರ್ಥ್ಯಗಳನ್ನು ಎತ್ತಿ ತೋರಿಸಿದರು ಮತ್ತು ಆಸ್ಟ್ರೇಲಿಯನ್ ಸೂಪರ್ ಅನ್ನು ಭಾರತದೊಂದಿಗೆ ಪಾಲುದಾರಿಕೆ ಮಾಡಲು ಆಹ್ವಾನಿಸಿದರು. ಮೂರು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಭಾಗವಹಿಸಲು ಆ ದೇಶಕ್ಕೆ ಆಗಮಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.