ನವದೆಹಲಿ: ಈ ಭಾನುವಾರ ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪೀಕರ್ ಸ್ಥಾನದ ಬಳಿ ಐತಿಹಾಸಿಕ ಚಿನ್ನದ ರಾಜದಂಡವನ್ನು ಸ್ಥಾಪಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ಹಸ್ತಾಂತರವನ್ನು ಗುರುತಿಸಲು ಈ ರಾಜದಂಡವನ್ನು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಹಸ್ತಾಂತರಿಸಲಾಯಿತು ಎಂದು ಶಾ ಹೇಳಿದರು.
ಈ ರಾಜದಂಡವನ್ನು “ಸೆಂಗೊಲ್” ಎಂದು ಕರೆಯಲಾಗುತ್ತದೆ – ಇದು ತಮಿಳು ಪದ “ಸೆಮ್ಮೈ” ನಿಂದ ಬಂದಿದೆ, ಅಂದರೆ “ಸದಾಚಾರ” ಎಂದು ಗೃಹ ಸಚಿವರು ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ ಅವರು, ಐತಿಹಾಸಿಕ ರಾಜದಂಡವಾದ ‘ಸೆಂಗೊಲ್’ ಅನ್ನು ಅಲಹಾಬಾದ್ನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಯಿತು, 1947ರ ಆಗಸ್ಟ್ 14ರಂದು ನೆಹರೂ ಅವರು ಅನುಭವಿಸಿದ ಅದೇ ಭಾವನೆಯನ್ನು ಈ ಸೆಂಗೋಲ್ ಪ್ರತಿನಿಧಿಸುತ್ತದೆ ಎಂದು ಶಾ ಹೇಳಿದ್ದಾರೆ.
ಅಧಿಕಾರದ ಹಸ್ತಾಂತರ ಎಂದರೆ ಕೇವಲ ಕೈ ಕುಲುಕುವುದು ಅಥವಾ ದಾಖಲೆಗಳಿಗೆ ಸಹಿ ಮಾಡುವುದು ಮಾತ್ರ ಆಗಿರಬಾರದು, ಆಧುನಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಸಂಪ್ರದಾಯಗಳೊಂದಿಗೆ ಸಂಪರ್ಕ ಹೊಂದಿರಬೇಕು ಎಂದಿದ್ದಾರೆ.
ಮೇ 28 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ. ಇದು ಪ್ರಧಾನಿಯವರ ದೂರದೃಷ್ಟಿಗೆ ಅನುಗುಣವಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.