ನವದೆಹಲಿ: ಹೊಸ ಸಂಸತ್ತಿನ ಕಟ್ಟಡದಲ್ಲಿ ರಾಜದಂಡ ಸೆಂಗೋಲ್ ಅನ್ನು ಸ್ಥಾಪಿಸುವ ಕುರಿತು ಪ್ರತಿಪಕ್ಷಗಳು ಸುಖಾಸುಮ್ಮನೆ ವಿವಾದ ಸೃಷ್ಟಿಸಲು ಮುಂದಾಗಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸೆಂಗೋಲ್ ಅನ್ನು ‘ವಾಕಿಂಗ್ ಸ್ಟಿಕ್’ ಎಂದು ಕಾಂಗ್ರೆಸ್ ಬಿಂಬಿಸಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ. 1947 ರಲ್ಲಿ ಬ್ರಿಟಿಷರು ಭಾರತಕ್ಕೆ ಅಧಿಕಾರವನ್ನು ಹಸ್ತಾಂತರಿಸುವ ಸಂಕೇತವಾಗಿ ಸೆಂಗೋಲ್ ನೀಡಿದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಕಾಂಗ್ರೆಸ್ ವಾದ ಖಂಡಿಸಿದ ಶಾ, ಕಾಂಗ್ರೆಸ್ ತನ್ನ ನಡತೆಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ಟ್ವೀಟ್ ಮಾಡಿರುವ ಶಾ, “ಕಾಂಗ್ರೆಸ್ ಪಕ್ಷವು ಭಾರತೀಯ ಸಂಪ್ರದಾಯಗಳು ಮತ್ತು ಸಂಸ್ಕೃತಿಯನ್ನು ಏಕೆ ದ್ವೇಷಿಸುತ್ತದೆ? ಭಾರತದ ಸ್ವಾತಂತ್ರ್ಯವನ್ನು ಸಂಕೇತಿಸಲು ತಮಿಳುನಾಡಿನ ಪವಿತ್ರ ಶೈವ ಮಠವು ಪಂಡಿತ್ ನೆಹರೂ ಅವರಿಗೆ ಪವಿತ್ರ ಸೆಂಗೋಲ್ ಅನ್ನು ನೀಡಲಾಯಿತು ಆದರೆ ಅದನ್ನು ವಸ್ತುಸಂಗ್ರಹಾಲಯದಲ್ಲಿ ವಾಕಿಂಗ್ ಸ್ಟಿಕ್ ಎಂದು ಬಿಂಬಿಸಿ ಇಡಲಾಯಿತು” ಎಂದಿದ್ದಾರೆ.
Why does the Congress party hate Indian traditions and culture so much? A sacred Sengol was given to Pandit Nehru by a holy Saivite Mutt from Tamil Nadu to symbolize India’s freedom but it was banished to a museum as a ‘walking stick’.
— Amit Shah (@AmitShah) May 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.