ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹಾಗೂ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರು ಈ ಬಾರಿಯ ವಿಶ್ವಕರ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ಸೆ.27ರಂದು ನಡೆಯಲಿರುವ 7ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತಿ ಉತ್ಸವ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ. ನಂಜುಂಡಿ ತಿಳಿಸಿದ್ದಾರೆ. ಪ್ರಶಸ್ತಿಯು 1 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಅಪರಂಜಿ ಚಿನ್ನದಿಂದ ತಯಾರಿಸಲ್ಪಟ್ಟ ವಿಶ್ವಕರ್ಮರ ಚಿತ್ರ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 250 ಕೆ.ಜಿ. ತೂಕದ ವಿಶ್ವಕರ್ಮರ ಪುತ್ಥಳಿಗೆ ಹೆಲಿಕಾಫ್ಟರ್ ಮೂಲಕ ಪುಷ್ಪವೃಷ್ಟಿ ಹರಿಸಲಿರುವರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.