ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ.
ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರವನ್ನು ಪ್ರಕಟಿಸಲಿದೆ. ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ. ಅಲ್ಲದೆ, ಪಕ್ಷದ ಸಭೆಗಳಲ್ಲಿ ಈ ವಿಷಯವಾಗಿ ಚರ್ಚಿಸುತ್ತಿರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು. ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದು ಸೂಕ್ತವಲ್ಲ ಎಂದು ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.