ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿ ಇಂದು ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರೆದಿಗಳು ತಿಳಿಸಿವೆ.
ಇಂದು ಬೆಳಗ್ಗೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕೊಡಗು ಎಸ್ಪಿ ರಾಮರಾಜನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ನಿಷೇಧಿತ ಸಂಘಟನೆ ಪಿಎಫ್ಐನಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದೆ. ಸೋಮವಾರಪೇಟೆಯಲ್ಲಿ ಹಲವು ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಅಧಿಕಾರಿಗಳು ಈಗಾಗಲೇ ಸಾಕಷ್ಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಲವು ಬಾರಿ ದಾಳಿಗಳನ್ನು ನಡೆಸಿ ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿದ್ದಾರೆ. ತನಿಖೆಯ ಭಾಗವಾಗಿ ಪಿಎಫ್ ಐ ಕಾರ್ಯಕರ್ತರು ಮತ್ತು ಮುಖಂಡ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.