ನವದೆಹಲಿ: ಇಂದು ಮುಂಜಾನೆ ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಘಟನೆಯ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದೆ.
ಪ್ರಧಾನಿಯವರ ಅಧಿಕೃತ ನಿವಾಸವು ನೊ ಫ್ಲೈ ಝೋನ್ ಅಡಿಯಲ್ಲಿ ಬರುತ್ತದೆ. ಹಾಗಿದ್ದರೂ ಡ್ರೋನ್ ಹಾರಾಟವು ಭಾರೀ ಆತಂಕವನ್ನು ಸೃಷ್ಟಿ ಮಾಡಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಡ್ರೋನ್ ಪತ್ತೆಯಾಗಿದೆ. ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಮೂಲಗಳು ತಿಳಿಸಿವೆ.
“ಪ್ರಧಾನಿ ನಿವಾಸದ ಮೇಲಿರುವ ನೋ ಫ್ಲೈಯಿಂಗ್ ಝೋನ್ ನಲ್ಲಿ ಡ್ರೋನ್ ಹಾರಾಟ ನಡೆಸುವ ಬಗ್ಗೆ ಮಾಹಿತಿ ಲಭಿಸಿದೆ. ಬೆಳಗ್ಗೆ 5:30ಕ್ಕೆ ಎಸ್ಪಿಜಿ ಪೊಲೀಸರನ್ನು ಸಂಪರ್ಕಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ” ಎಂದು ವರದಿ ಹೇಳಿದೆ.
ಆದರೆ, ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳು ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳನ್ನು ಇದುವರೆಗೆ ಪತ್ತೆಹಚ್ಚಿಲ್ಲ ಎಂದು ಮೂಲಗಳ ತಿಳಿಸಿವೆ.
Report of drone flying over PM Modi's residence, Delhi Police launch probe
Read @ANI Story | https://t.co/WHsOfCvnw5#Delhi #PMModi #drone #Delhipolice pic.twitter.com/jMmJXbryut
— ANI Digital (@ani_digital) July 3, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.