ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಅವದು ಮಂಡಿಸಿದ 14ನೇ ಬಜೆಟ್ ಆಗಿದೆ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ.
ಐದು ಪ್ರಮುಖ ಚುನಾವಣಾ ಖಾತರಿಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು. ಇದರಿಂದ 1.3 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ಸಿದ್ದರಾಮಯ್ಯ ಬಜೆಟ್ ಘೋಷಣೆಯಲ್ಲಿ ತಿಳಿಸಿದ್ದಾರೆ
ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾಮಾಜಿಕ ಸೇವೆ, ಮೂಲಸೌಕರ್ಯ ಒದಗಿಸುವುದು, ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಪರಿಸರ ಸಂರಕ್ಷಣೆ, ಆರ್ಥಿಕ ಅಭಿವೃದ್ಧಿಗೆ ಉತ್ತೇಜನ, ರೈತರ ಏಳಿಗೆ, ಸಂಪನ್ಮೂಲಗಳ ನ್ಯಾಯಯುತ ಹಂಚಿಕೆ ಮತ್ತು ಸಮಾನ ಅವಕಾಶಗಳ ಸೃಜನೆ ಮಾಡುವುದು ನಮ್ಮ ಆದ್ಯತೆಯಾಗಿರುತ್ತದೆ ಎಂದು ಹೇಳಿದರು.
ನಮ್ಮ ಐದು ಖಾತರಿಗಳ ಮೂಲಕ ಸರ್ಕಾರವು ಪ್ರತಿ ಕುಟುಂಬಕ್ಕೆ ತಿಂಗಳಿಗೆ ಸರಾಸರಿ ನಾಲ್ಕು ಸಾವಿರದಿಂದ ಐದು ಸಾವಿರ ರೂಪಾಯಿಗಳ ಹೆಚ್ಚುವರಿ ಆರ್ಥಿಕ ನೆರವನ್ನು ನೀಡುತ್ತದೆ. ಇದು ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಆಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ ಎಂದರು.
ನಮ್ಮ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ. ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.