ಬೆಂಗಳೂರು: ಇಂದು ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಮಹತ್ವದ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ಪ್ರಯೋಜನಕಾರಿ ಉಪಕ್ರಮಗಳನ್ನು ಅವರು ಕೈಬಿಟ್ಟಿರುವುದಕ್ಕೆ ಅಸಮಾಧಾನಗಳೂ ವ್ಯಕ್ತವಾಗಿದೆ.
ಬಿಜೆಪಿಯ ಎಪಿಎಂಸಿ ಕಾಯ್ದೆಯನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ. ಪಠ್ಯ ಪರಿಷ್ಕರಣೆಯನ್ನು ಕೈಬಿಟ್ಟಿದ್ದಾರೆ. ಮಾತ್ರವಲ್ಲದೆ ಕೇಂದ್ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿ ಮಾಡದೆ ಇರಲು ಮತ್ತು ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲು ನಿರ್ಧರಿಸಿದ್ದಾರೆ.
ಅಷ್ಟೇ ಅಲ್ಲದೇ ಬಿಜೆಪಿ ಘೋಷಿಸಿದ್ದ ಜಿಲ್ಲೆಗೊಂದು ಗೋಶಾಲೆ ಯೋಜನೆಯನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ, ಕೃಷಿ ಭೂಮಿ ಮಾರಾಟ ಕಾಯ್ದೆಗೂ ಕೊಕ್ ನೀಡಿದ್ದಾರೆ. ವಿವೇಕ ಶಾಲೆ ಅಭಿವೃದ್ಧಿ ಯೋಜನೆ ರದ್ದುಪಡಿಸಿದ್ದಾರೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಗೆ ಕೋಕ್ ನೀಡಿದ್ದಾರೆ ಮತ್ತು ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆಗೂ ಕೋಕ್ ನೀಡಿದ್ದಾರೆ.
ಮಹಿಳೆಯರ ಸ್ವಸಹಾಯ ಸಂಘದ ಸಹಾಯಧನ ಬಂದ್ ಮಾಡಿದ್ದಾರೆ. ಭೂಸಿರಿ ಯೋಜನೆ ಅಡಿ ನೀಡುವ 10,000 ಇನ್ನು ಮುಂದೆ ದೊರೆಯುವುದಿಲ್ಲ. 500 ರೂಪಾಯಿ ನೀಡುವ ಶ್ರಮಶಕ್ತಿ ಯೋಜನೆಯನ್ನು ಕೂಡ ಬಂದ್ ಮಾಡಿದ್ದಾರೆ. ಅಗ್ನಿವೀರ್ ತರಬೇತಿ ಯೋಜನೆಗೂ ಕೊಕ್ ನೀಡಿದ್ದಾರೆ.
ಒಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರ ಹಲವು ಮಹತ್ವದ ಯೋಜನೆಗಳಿಗೆ ಕೊಕ್ ನೀಡಿದ್ದು ರಾಜ್ಯದ ಜನತೆಯ ಅಸಮಾಧಾನಕ್ಕೆ ಕಾರಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.