ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ತಂಡದ ಅತೀ ಯಶಸ್ವಿ ನಾಯಕ ಎನಿಸಿದ್ದ ಸೌರವ್ ಗಂಗೂಲಿ ಇದೀಗ ಯಶಸ್ವಿ ಕ್ರಿಕೆಟ್ ಆಡಳಿತಗಾರನಾಗುವತ್ತ ಹೆಜ್ಜೆಯಿಟ್ಟಿದ್ದಾರೆ. ಕ್ರಿಕೆಟ್ ಆಸೋಸಿಯೇಶನ್ ಆಫ್ ಬೆಂಗಾಳ್ನ ಅಧ್ಯಕ್ಷರಾಗಿ ಗುರುವಾರ ಅವರು ಆಯ್ಕೆಗೊಂಡಿದ್ದಾರೆ.
ಜಗಮೋಹನ್ ದಾಲ್ಮಿಯಾ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಗಂಗೂಲಿ ಆಯ್ಕೆಯಾಗಿದ್ದಾರೆ. ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಇತರ ಕ್ರಿಕೆಟ್ ಅಸೋಸಿಯೇಶನ್ ಅಧಿಕಾರಿಗಳ ಸಮ್ಮುಖದಲ್ಲಿ ಗಂಗೂಲಿ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಘೋಷಣೆ ಮಾಡಿದರು.
ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ದಾಲ್ಮೀಯಾ ಅವರ ಮಗ ಅವಿಷೇಕ್ ದಾಲ್ಮೀಯಾ ಅವರನ್ನು ಇಬ್ಬರು ಜಂಟಿ ಕಾರ್ಯದರ್ಶಿಗಳಲ್ಲಿ ಒಬ್ಬರನ್ನಾಗಿ ನೇಮಕ ಮಾಡಲಾಗಿದೆ. ಸಬೀರ್ ಗಂಗೂಲಿ ಜಂಟಿ ಕಾರ್ಯದರ್ಶಿ ಸ್ಥಾನದಲ್ಲಿ ಮುಂದುವರೆಯಲಿದ್ದು, ಬಿಸ್ವರೂಪ್ ಡೇ ಅವರು ಖಜಾಂಚಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.