ನವದೆಹಲಿ: ಐತಿಹಾಸಿಕ ಕ್ಷಣವೊಂದರಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನೀಡಿ ಗೌರವಿಸಿದರು. ಇದು ಮಿಲಿಟರಿ ಅಥವಾ ನಾಗರಿಕ ಆದೇಶಗಳಲ್ಲಿ ಅತ್ಯುನ್ನತ ಫ್ರೆಂಚ್ ಗೌರವವಾಗಿದೆ.
ಪ್ರಧಾನಿ ಮೋದಿ ಈ ಗೌರವಕ್ಕೆ ಪಾತ್ರರಾದ ಮೊದಲ ಭಾರತೀಯ ʻಪ್ರಧಾನಿಯಾಗಿದ್ದಾರೆ. ಗೌರವ ಪ್ರದಾನಿಸಿದ್ದಕ್ಕಾಗಿ ಮೋದಿ ಭಾರತದ ಜನತೆಯ ಪರವಾಗಿ ಮ್ಯಾಕ್ರನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಎಲಿಸೀ ಪ್ಯಾಲೇಸ್ನಲ್ಲಿ ನಡೆಯಿತು, ಅಲ್ಲಿ ಮ್ಯಾಕ್ರನ್ ಪ್ರಧಾನಿ ಮೋದಿಯವರಿಗೆ ಖಾಸಗಿ ಔತಣಕೂಟದ ಆತಿಥ್ಯ ನೀಡಿದರು.
“ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ 13 ಜುಲೈರಂದು ಫ್ರಾನ್ಸ್ನ ಅತ್ಯುನ್ನತ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ಅನ್ನು ಫ್ರಾನ್ಸ್ ಅಧ್ಯಕ್ಷರಾದ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ನೀಡಿದರು. ಈ ಗೌರವಕ್ಕಾಗಿ ಪ್ರಧಾನಮಂತ್ರಿಯವರು ಭಾರತದ ಜನರ ಪರವಾಗಿ ಧನ್ಯವಾದ ಅರ್ಪಿಸಿದರು” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಈ ಹಿಂದೆ, ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ಅನ್ನು ಪ್ರಪಂಚದಾದ್ಯಂತದ ಆಯ್ದ ಪ್ರಮುಖ ನಾಯಕರು ಮತ್ತು ಪ್ರಖ್ಯಾತ ವ್ಯಕ್ತಿಗಳು ಸ್ವೀಕರಿಸಿದ್ದಾರೆ. ಇವರಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ, ಕಿಂಗ್ ಚಾರ್ಲ್ಸ್, ಮಾಜಿ ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಮತ್ತು ಮಾಜಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬೌಟ್ರೋಸ್ ಬೌಟ್ರೋಸ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.